ಸೋಂದಾ ಸ್ವರ್ಣವಲ್ಲಿ ಮಠದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಅನಂತಮೂರ್ತಿ ಹೆಗಡೆ ಭಾಗಿ

Sep 11, 2026 - 11:47
 0  86
ಸೋಂದಾ ಸ್ವರ್ಣವಲ್ಲಿ ಮಠದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಅನಂತಮೂರ್ತಿ ಹೆಗಡೆ ಭಾಗಿ

ಆಪ್ತ ನ್ಯೂಸ್ ಶಿರಸಿ:

ಸೋಂದಾ ಸ್ವರ್ಣವಲ್ಲಿ ಮಠದ ಪೀಠಾಧಿಪತಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳ ಚಾತುರ್ಮಾಸ್ಯ ವೃತಾಚರಣೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಕುಟುಂಬಸ್ಥರೊಂದಿಗೆ ಭಾಗವಹಿಸಿ, ಶ್ರದ್ಧಾ–ಭಕ್ತಿಯಿಂದ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಅನಂತಮೂರ್ತಿ ಹೆಗಡೆ ಹಾಗೂ ಕುಟುಂಬಸ್ಥರು ಶ್ರೀಗಳ ಪಾದುಕೆಗಳಿಗೆ ಪೂಜೆ ಸಲ್ಲಿಸಿ, ಅರ್ಚನೆ ಹಾಗೂ ಷೋಡಶೋಪಚಾರ ಪೂಜೆಯಲ್ಲಿ ಪಾಲ್ಗೊಂಡರು. ಬಳಿಕ ಶ್ರೀಗಳ ದಿವ್ಯ ಆಶೀರ್ವಾದ ಹಾಗೂ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

ನಂತರ ಮಾತನಾಡಿದ ಅನಂತಮೂರ್ತಿ ಹೆಗಡೆ, “ಪೂಜ್ಯ ಗುರುಗಳ ಚಾತುರ್ಮಾಸ್ಯ ವೃತಾಚರಣೆಯಂತಹ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುಗಳ ಕೃಪೆಗೆ ಪಾತ್ರರಾಗಿರುವುದು ನನಗೆ ಧನ್ಯತೆಯ ಭಾವ ಮೂಡಿಸಿದೆ. ಗುರುಗಳ ಆಶೀರ್ವಾದ ಸದಾ ಎಲ್ಲ ಭಕ್ತರ ಮೇಲೂ ಇರಲಿ” ಎಂದು ಆಶಿಸಿದರು.

ಚಾತುರ್ಮಾಸ್ಯ ವೃತಾಚರಣೆಯ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಶ್ರದ್ಧಾ–ಭಕ್ತಿಯಿಂದ ಪಾಲ್ಗೊಂಡರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0