ಬಿಜೆಪಿಯ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ

Feb 19, 2026 - 19:04
 0  70
ಬಿಜೆಪಿಯ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ

ಆಪ್ತ ನ್ಯೂಸ್‌ ಶಿರಸಿ:

ಪಕ್ಷನಿಷ್ಠೆ, ಕರ್ತವ್ಯ ಶ್ರದ್ಧೆ ಮತ್ತು ಸಂಘಟನಾ ಶಕ್ತಿ, ರೈತಪರ ಕಾಳಜಿಯನ್ನು ಗುರುತಿಸಿ, ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಅವರನ್ನು ಬಿಜೆಪಿಯ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷನನ್ನಾಗಿ ನೇಮಿಸಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ.

ಅನಂತಮೂರ್ತಿ ಹೆಗಡೆಯವರು ಎನ್ ಎಸ್ ಹೆಗಡೆ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸದಾ ಹುರಿದುಂಬಿಸಿ ಬೆಂಬಲಿಸುತ್ತಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ, ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ರೈತಮೋರ್ಚಾ ಅಧ್ಯಕ್ಷರಾದ ಎ.ಎಸ್.ಪಾಟೀಲ ನಡಹಳ್ಳಿ ಹಾಗೂ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ, ಮಾಜಿ ಸಚಿವರುಗಳಾದ ಸುನೀಲ್ ಕುಮಾರ ಕಾರ್ಕಳ, ಹರತಾಳು ಹಾಲಪ್ಪ, ರಾಜ್ಯ ಉಪಾಧ್ಯಕ್ಷರಾದ ರೂಪಾಲಿ ಎಸ್ ನಾಯ್ಕ, ಕುಮಟಾ ಶಾಸಕರಾದ ದಿನಕರ ಕೆ. ಶೆಟ್ಟಿ, ಮಾಜಿ ಶಾಸಕರುಗಳಾದ  ಸುನೀಲ ನಾಯ್ಕ, ಸುನಿಲ್ ಹೆಗಡೆಯವರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾಜ ಕೆ.ಜಿ.ನಾಯ್ಕ ಮತ್ತು ಪಕ್ಷದ ಜಿಲ್ಲೆಯ ಎಲ್ಲ ಪ್ರಧಾನ ಕಾರ್ಯದರ್ಶಿಗಳು, ನಿಕಟಪೂರ್ವ ಅಧ್ಯಕ್ಷರಾದ ರಮೇಶ ನಾಯ್ಕ ಕುಪ್ಪಳ್ಳಿ, ಜಿಲ್ಲಾ ಕೋರ್ ಕಮಿಟಿ ಸದಸ್ಯರು, ಎಲ್ಲಾ ಮಂಡಳಾಧ್ಯಕ್ಷರು, ಸಮಸ್ತ ಕಾರ್ಯಕರ್ತರುಗಳಿಗೆ ಅನಂತಮೂರ್ತಿ ಹಗಡೆ ಅವರು ಧನ್ಯವಾದವನ್ನು ಸಲ್ಲಿಸಿದ್ದಾರೆ. 

ನಿರಂತರ ಹೋರಾಟದಿಂದ ಗುರುತಿಸಿಕೊಂಡ ನಾನು ಪಕ್ಷ ನೀಡಿದ ಹುದ್ದೆಗೆ ನ್ಯಾಯ ಒದಗಿಸುವುದರ ಜೊತೆಗೆ ಜಿಲ್ಲೆಯ ರೈತಪರ, ಪಕ್ಷದ ಕಾರ್ಯಕರ್ತರ ಪರ, ನೊಂದವರ ಪರ, ನ್ಯಾಯದ ಪರ ಧ್ವನಿಯಾಗಿ ಕೆಲಸ ಮಾಡುತ್ತೇನೆಂದು ಆಶ್ವಾಸನೆ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0