ಮೂಡಿ ನಿಧನಕ್ಕೆ ಅನಂತಕುಮಾರ್ ಹೆಗಡೆ ಸಂತಾಪ

Nov 3, 2025 - 17:52
Nov 3, 2025 - 17:52
 0  95
ಮೂಡಿ ನಿಧನಕ್ಕೆ ಅನಂತಕುಮಾರ್ ಹೆಗಡೆ ಸಂತಾಪ
ಮೂಡಿ ನಿಧನಕ್ಕೆ ಅನಂತಕುಮಾರ್ ಹೆಗಡೆ ಸಂತಾಪ

ಆಪ್ತ ನ್ಯೂಸ್ ಶಿರಸಿ:

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕಾಶೀನಾಥ ಮೂಡಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಸಂತಾಪ ಸೂಚಿಸಿದ್ದಾರೆ.

ಸಮಾಜ ಸೇವಕರೂ. ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಅನೇಕ ಸಂಘ ಸಂಸ್ಥೆಗಳಲ್ಲಿ  ಶ್ರಮಿಸಿದ ಹಿರಿಯರಾದ ಕಾಶಿನಾಥ್ ಮೂಡಿ  ಇಂದು ನಮ್ಮನ್ನಗಲಿದ ಸುದ್ದಿ ಕೇಳಿ ಮನಸ್ಸಿಗೆ ಅತೀವ ದುಃಖವಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಇವರು ನಮಗೆಲ್ಲ ಮಾರ್ಗದರ್ಶನ ಮಾಡಿದವರು.
ಇವರ ಆತ್ಮಕ್ಕೆ ಭಗವಂತನು ಚಿರಶಾಂತಿ ಯನ್ನು ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅನಂತಕುಮಾರ್ ಹೆಗಡೆ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0