ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರೋಹನ್ ಆಯ್ಕೆ

Nov 16, 2025 - 20:04
 0  14
ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರೋಹನ್ ಆಯ್ಕೆ

ಆಪ್ತ ನ್ಯೂಸ್‌ ದಾಂಡೇಲಿ:

ದಾಂಡೇಲಿ : ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಡಿ ಶಿರಸಿಯಲ್ಲಿ ನಡೆದ 14 ವರ್ಷ ವಯೋಮಿತಿಯೊಳಗಿನ ಬಾಲಕರ ಬೆಳಗಾವಿ ವಿಭಾಗೀಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕೆನರಾ ವೆಲ್ಫೇರ್ ಟ್ರಸ್ಟಿನ ದಾಂಡೇಲಿಯ ಇ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಆರೋಹನ್ ರೋಷನಜಿತ್ ಅತ್ಯುತ್ತಮ ಪ್ರದರ್ಶನದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ, ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾನೆ. 

ರಾಜ್ಯಮಟ್ಟಕ್ಕೆ ಆಯ್ಕೆಯಾದ ಆರೋಹನ್ ಈತನ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ, ದೈಹಿಕ ಶಿಕ್ಷಣ ಪರಿವೀಕ್ಷಕರು, ನಗರದ ಜನತಾ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ, ಜನತಾ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಇಎಮ್ಎಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಶಿಕ್ಷಕ ವೃಂದವರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1