ಡಿವೈಡರ್‌ಗೆ ಆಟೋ ಡಿಕ್ಕಿ ಹೊಡೆದು ಪಲ್ಟಿ: ಚಾಲಕ ಸ್ಥಳದಲ್ಲೇ ದುರ್ಮರಣ

Jun 21, 2026 - 08:25
 0  164
ಡಿವೈಡರ್‌ಗೆ ಆಟೋ ಡಿಕ್ಕಿ ಹೊಡೆದು ಪಲ್ಟಿ: ಚಾಲಕ ಸ್ಥಳದಲ್ಲೇ ದುರ್ಮರಣ

ಶಿರಸಿ: ನಗರದ ಸರ್ಕಾರಿ ಆಸ್ಪತ್ರೆ ಸಮೀಪದ ಆವೆ ಮರಿಯಾ ಶಾಲೆ ಎದುರಿನ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋ ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಣೇಶ ನಗರದ ನಿವಾಸಿ ಮಹೇಶ ಗಾಂವ್ಕರ್ (30) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಲಭ್ಯವಿರುವ ಮಾಹಿತಿಯಂತೆ, ಮಹೇಶ ಅವರು ಚಾಲನೆ ಮಾಡುತ್ತಿದ್ದ ಆಟೋ ರಿಕ್ಷಾ ಏಕಾಏಕಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಟೋ ನಿಯಂತ್ರಣ ತಪ್ಪಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಕುರಿತು ಸಂಚಾರಿ ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ದೇವೇಂದ್ರ ನಾಯ್ಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ವಾಹನ ಸಂಚಾರ ಸುಗಮವಾಗುವಂತೆ ಕ್ರಮ ಕೈಗೊಂಡರು.

ಸ್ಥಳೀಯರ ಪ್ರಕಾರ, ಅಪಘಾತದ ಶಬ್ದ ಕೇಳಿ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿದರೂ, ಅಷ್ಟರಲ್ಲೇ ಚಾಲಕ ಮೃತಪಟ್ಟಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0