ನಾನು ಹಿಂದುಳಿದ ವರ್ಗಕ್ಕೆ ಸೇರಿದ್ದೇನೆ, ಸಚಿವ ಸ್ಥಾನ ಕೊಡಿ: ಬೇಳೂರು ಆಗ್ರಹ
ಆಪ್ತ ನ್ಯೂಸ್ ಸಾಗರ:
ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ದೆಹಲಿಗೆ ಹೋದಾಗ ವರಿಷ್ಟರಿಗೆ ಮನವಿ ಮಾಡಿದ್ದೇನೆ. ನಾನು ಮೂರು ಬಾರಿ ಗೆದ್ದಿರುವ ಹಿರಿಯ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಶಾಸಕನಾಗಿದ್ದು, ನನ್ನ ಹಕ್ಕು ಕೇಳಲು ಮುಜುಗರ ಇಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಬಳಿ ಕೇಳಿದ್ದೇನೆ. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಅಗತ್ಯ ಬಿದ್ದರೆ ಸಚಿವ ಸ್ಥಾನಕ್ಕಾಗಿ ವರಿಷ್ಟರನ್ನು ಭೇಟಿಯಾಗಲು ಮತ್ತೊಮ್ಮೆ ದೆಹಲಿಗೆ ತೆರಳುತ್ತೇನೆ. ಆದರೆ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ನಾನು ಹಿಂದಿನಿAದಲೂ ಹೇಳುತ್ತಾ ಬಂದಿದ್ದೇನೆ. ಮುಖ್ಯಮಂತ್ರಿ ಬದಲಾವಣೆ, ಸಚಿವರ ಬದಲಾವಣೆ ಶಾಸಕರ ಕೈನಲ್ಲಿ ಇಲ್ಲ. ಎಲ್ಲವೂ ರಾಷ್ಟಿçÃಯ ನಾಯಕರು ನೋಡಿ ಕೊಳ್ಳುತ್ತಾರೆ. ರಾಷ್ಟಿçÃಯ ನಾಯಕರು ಯಾವ ತೀರ್ಮಾನ ಮಾಡುತ್ತಾರೋ ಅದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಸರ್ಕಾರ ಐದು ವರ್ಷ ಸುಸೂತ್ರವಾಗಿ ನಡೆಯಬೇಕು ಎನ್ನುವುದು ಎಲ್ಲರ ಅಭಿಮತ ಎಂದು ಹೇಳಿದರು.
ಸಾಗರ ಜಿಲ್ಲೆ ಮಾಡಲು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲವಿದೆ. ಈಗಾಗಲೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಲ್ಲದೆ ಅವರನ್ನು ಭೇಟಿಯಾಗಿ ಉಪವಿಭಾಗೀಯ ಕೇಂದ್ರವಾಗಿರುವ ಸಾಗರವನ್ನು ಜಿಲ್ಲೆ ಎಂದು ಘೋಷಿಸುವಂತೆ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ಅಂತಹ ಪ್ರಸ್ತಾಪ ಇಲ್ಲ, ಒಂದೊಮ್ಮೆ ಜಿಲ್ಲೆ ಮಾಡುವುದಾದರೆ ಸಾಗರವನ್ನೇ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಶಿಕಾರಿಪುರವನ್ನು ಜಿಲ್ಲೆಯಾಗಿ ಘೋಷಣೆ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗಣಪತಿ ಮಂಡಗಳಲೆ, ಮಧುಮಾಲತಿ, ರವಿ ಲಿಂಗನಮಕ್ಕಿ, ಕಿರಣ್ ದೊಡ್ಮನೆ, ಚಂದ್ರು ಕಂಬಳಿಕೊಪ್ಪ ಇನ್ನಿತರರು ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



