ಮನೆ ಕುಸಿತ ಸಂತ್ರಸ್ತರಿಗೆ ಶಾಸಕ ಭೀಮಣ್ಣ ನಾಯ್ಕ ಸಾಂತ್ವನ; ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ
ಆಪ್ತ ನ್ಯೂಸ್ ಸಿದ್ದಾಪುರ:
ಸಿದ್ದಾಪುರ ಪಟ್ಟಣ ವ್ಯಾಪ್ತಿಯ ಕೊಂಡ್ಲಿ ಗ್ರಾಮದ ನಿವಾಸಿ ಜಯಲಕ್ಷ್ಮೀ ನಾಯ್ಕ ಅವರ ಮನೆ ದುರದೃಷ್ಟವಶಾತ್ ಕುಸಿದು ಬಿದ್ದ ಹಿನ್ನೆಲೆ, ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸ್ಥಳೀಯ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಶಾಸಕ ಭೀಮಣ್ಣ ನಾಯ್ಕ, ಸರ್ಕಾರದಿಂದ ಸಂತ್ರಸ್ತ ಕುಟುಂಬಕ್ಕೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳು ಹಾಗೂ ಸೂಕ್ತ ಪರಿಹಾರವನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ತಲುಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಅಧಿಕಾರಿಗಳೊಂದಿಗೆ ಹಾನಿಯ ಪ್ರಮಾಣವನ್ನು ಪರಿಶೀಲಿಸಿದ ಶಾಸಕ ಭೀಮಣ್ಣ ನಾಯ್ಕ, ಸಂತ್ರಸ್ತ ಕುಟುಂಬದ ನೆರವಿಗೆ ಸರ್ಕಾರ ಬದ್ಧವಾಗಿದ್ದು, ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮನೆ ಕಳೆದುಕೊಂಡ ಕುಟುಂಬಕ್ಕೆ ತಾತ್ಕಾಲಿಕ ನೆರವು ಹಾಗೂ ಸರ್ಕಾರಿ ನಿಯಮಾನುಸಾರ ದೊರೆಯುವ ಪರಿಹಾರವನ್ನು ಶೀಘ್ರವಾಗಿ ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0



