ಬ್ರಾಹ್ಮಣ ಸಮುದಾಯದವರು ಸೌಲಭ್ಯ ಪಡೆದುಕೊಳ್ಳಲು ಹಿಂದೇಟು ಹಾಕಬಾರದು: ಪಿ.ಎಂ.ಮಾಲತೇಶ್

Oct 5, 2025 - 13:38
 0  3
ಬ್ರಾಹ್ಮಣ ಸಮುದಾಯದವರು ಸೌಲಭ್ಯ ಪಡೆದುಕೊಳ್ಳಲು ಹಿಂದೇಟು ಹಾಕಬಾರದು: ಪಿ.ಎಂ.ಮಾಲತೇಶ್

ಆಪ್ತ ನ್ಯೂಸ್ ಸಾಗರ: 
ರಾಜ್ಯ ಸರ್ಕಾರ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಸಮುದಾಯದವರು ಸೌಲಭ್ಯ ಪಡೆಯಲು ಹಿಂದೇಟು ಹಾಕಬಾರದು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ನಿರ್ದೇಶಕ ಪಿ.ಎಂ.ಮಾಲತೇಶ್ ತಿಳಿಸಿದರು.
ಇಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಡಳಿ ಮೂಲಕ ಸರ್ಕಾರ ಜಾರಿಗೆ ತಂದಿರುವ ಯೋಜನೆ ಪಡೆಯಲು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಲು ಕರೆ ನೀಡಿದರು.
ಪ್ರಮುಖವಾಗಿ ಪಿಯುಸಿಯಿಂದ ಪದವಿವರೆಗೆ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಸಾಂದೀಪಿನಿ ಶಿಷ್ಯ ವೇತನ ಯೋಜನೆಯಡಿ ೧೫ಸಾವಿರ ರೂ. ನಿರ್ವಹಣಾ ವೆಚ್ಚ ನೀಡುತ್ತಿದ್ದು, ಅರ್ಹ ವಿಪ್ರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳು ಅರ್ಜಿಯ ಜೊತೆಗೆ ಆಧಾರ್ ಕಾರ್ಡ್ ಮತ್ತು ಇಡಬ್ಲೂö್ಯಎಸ್ ಸಂಖ್ಯೆಯನ್ನು ನಮೂದಿಸಬೇಕು.  ಮೆಡಿಕಲ್ ಮತ್ತು ಇಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ಸಹ ಧನ ಸಹಾಯ ನೀಡಲಾಗುತ್ತದೆ. ವಿದ್ಯಾರ್ಥಿಗಳು ದಿನಾಂಕ ೩೦-೧೧-೨೦೨೫ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಎಂದರು.
ಯೋಜನೆಯಡಿ ೪೫೦ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು ಈತನಕ ಸುಮಾರು ೬.೫೦ ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿಯಲ್ಲಿ ಯುಪಿಎಸ್‌ಸಿ, ಐಎಎಸ್ ಹಾಗೂ ರಾಜ್ಯ ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ಪೂರ್ವಭಾವಿ ತರಬೇತಿ ನೀಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಯುವಕ ಮತ್ತು ಯುವತಿಯರಿಗೆ ಸಣ್ಣ ಪ್ರಮಾಣದಲ್ಲಿ ಗೃಹ ಉದ್ಯಮ ನಡೆಸಲು ರೂ. ೨ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತದೆ. ಸಾಲಕ್ಕೆ ಶೇ. ೨೦ ಸಹಾಯಧನ ಇದ್ದು, ಶೇ. ೪ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ಅ. ೩೦ರೊಳಗೆ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಇದರ ಜೊತೆಗೆ ಮಂಡಳಿಯಿAದ ಬ್ರಾಹ್ಮಣ ಸಮುದಾಯದ ಶ್ರೇಯೋಭಿವೃದ್ದಿಗೆ ಪೂರಕವಾದ ಅನೇಕ ಯೋಜನೆಗಳ ಮನವಿ ನೀಡಲಾಗಿದೆ ಎಂದು ಹೇಳಿದರು.
ಗೋಷ್ಟಿಯಲ್ಲಿ ಮಾ.ಸ.ನಂಜುAಡಸ್ವಾಮಿ, ಚೂಡಾಮಣಿ ರಾಮಚಂದ್ರ, ನಾರಾಯಣಮೂರ್ತಿ ಕಾನುಗೋಡು, ಐ.ವಿ.ಹೆಗಡೆ, ನವೀನ್ ಜೋಯ್ಸ್, ಬದರಿನಾಥ್, ವಿನಾಯಕ ಜೋಯ್ಸ್, ಗೋಪಿ ದೀಕ್ಷಿತ್, ವೆಂಕಟೇಶ್, ಆರ್.ಎಸ್.ಹೆಗಡೆ, ನೇತ್ರಾ ಉಡುಪ, ವಿನೋದಾ, ಪುಷ್ಪ, ನಿರ್ಮಲಾ, ವೆಂಕಟೇಶ್ ಇನ್ನಿತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0