ಕಾರಿಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಬಸ್: 30ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯ

Nov 1, 2025 - 21:30
 0  167
ಕಾರಿಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಬಸ್: 30ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯ
ಚಿತ್ರ: ಸೃಜನಾತ್ಮಕ ಚಿತ್ರ ನಿರ್ಮಿತ (ಸಾಂದರ್ಭಿಕ)

ಆಪ್ತ ನ್ಯೂಸ್ ಹೊನ್ನಾವರ:

ಹೊನ್ನಾವರ ತಾಲೂಕಿನ ಗೇರುಸೊಪ್ಪ ಸೂಳೆಮೂರ್ಕಿ ಕ್ರಾಸ್ ಬಳಿ ಭಾರಿ ಅಪಘಾತ ನಡೆದ ಕುರಿತು ವರದಿಯಾಗಿದೆ. ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ನಡೆದಿದೆ. ಆ ಬಳಿಕ ಬಸ್ ಕಂದಕಕ್ಕೆ ಉರುಳಿಬಿದ್ದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.  ಬಸ್‌ನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರು ಹಾಗೂ ಕಾರನಲ್ಲಿ ಪ್ರಯಾಣ ಮಾಡುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಕೂಡ ತಿಳಿದುಬಂದಿದೆ.

ಕರ್ನಾಟಕ ಸಾರಿಗೆ ಬಸ್ ಬೆಂಗಳೂರಿನಿಂದ ಭಟ್ಕಳಕ್ಕೆ ಬರುತ್ತಿತ್ತು ಎನ್ನಲಾಗಿದೆ. ಸೂಳೆಮೂರ್ಕಿ ಕ್ರಾಸ್ ಬಳಿ ಎದುರಿನಿಂದ ಬಂದ್ ಕಾರ್ ಗೆ ಡಿಕ್ಕಿಯಾಗಿದೆ. ನಂತರ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ. ಬಸ್‌ನಲ್ಲಿದ್ದ ಬಹುತೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರ ಪರಿಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಸ್‌ನಲ್ಲಿ 30ಕ್ಕೂ ಹೆಚ್ಚಿನ ಪ್ರಯಾಣಿಕರಿದ್ದರು. ಗಾಯಗೊಂಡವರನ್ನೆಲ್ಲ ಐದಕ್ಕೂ ಹೆಚ್ಚು ಅಂಬ್ಯೂಲೆನ್ಸ್ ಮೂಲಕ ಹೊನ್ನಾವರ ಸರಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಬಸ್ ಪಲ್ಟಿಯಾಗಿರುವ ಕಾರಣ ಬೆಂಗಳೂರು ಹೊನ್ನಾವರ ಹೆದ್ದಾರಿಯಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0