ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ದರೆ ನಾಳೆ ಜನ್ಮದಿನವಿದ್ದರೂ ಹೋರಾಟ : ಬಿ.ವೈ. ವಿಜಯೇಂದ್ರ
ಆಪ್ತ ನ್ಯೂಸ್ ಬೆಳಗಾವಿ:
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಬೆಳಗಾವಿಯಲ್ಲಿ ಇಂದು ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿದ್ದರು.
ರಾಜ್ಯ ಸರ್ಕಾರ ಸ್ಥಳಕ್ಕೆ ಉಸ್ತುವಾರಿ ಸಚಿವರನ್ನಾಗಲಿ, ಸಕ್ಕರೆ ಸಚಿವರನ್ನಾಗಲಿ ಅಥವಾ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಥಳಕ್ಕೆ ಆಗಮಿಸಿ ಕಬ್ಬು ಬೆಳೆಗಾರರ ನ್ಯಾಯಯುತ ದರ ನಿಗದಿ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಇಲ್ಲದಿದ್ದರೆ ರೈತರ ಜೊತೆಯಾಗಿ ಹೋರಾಟದಲ್ಲಿ ಧುಮುಕುತ್ತೇನೆ. ನನ್ನ ಜನ್ಮದಿನವಿದ್ದರೂ ಕಣ್ಣೀರು ಸುರಿಸುತ್ತಿರುವ ರೈತರಿಗೆ ನಾಳೆ ಮೀಸಲಿಡುತ್ತೇನೆ. ಒಂದು ವೇಳೆ ನಾಳೆಯು ಬಗೆಹರಿಯದಿದ್ದರೆ ರಾಜ್ಯಾದ್ಯಂತ ರೈತರ ಕಿಡಿ ಹರಡುತ್ತದೆ ಎಂದು ಅವರು ಎಚ್ಚರಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ದುರ್ಯೋಧನ ಐಹೊಳೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬೆಳಗಾವಿ ನಗರ ಜಿಲ್ಲಾಧ್ಯಕ್ಷೆ ಶ್ರೀಮತಿ ಗೀತಾ ಸುತಾರ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ದುಂಡಪ್ಪ ಪಾಟೀಲ್, ವಿಜಯಪುರ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಜಿಲ್ಲಾ ಉಪಾಧ್ಯಕ್ಷ ದಾದಾಗೌಡ ಬಿರಾದಾರ, ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಮತ್ತು ಪ್ರಮುಖ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
What's Your Reaction?
Like
0
Dislike
1
Love
0
Funny
0
Angry
0
Sad
0
Wow
0



