ಶಿರಸಿ–ಕುಮಟಾ ರಸ್ತೆಯ ಸಂಪಖಂಡ ಬಳಿ ಕಾರು ಮರಕ್ಕೆ ಡಿಕ್ಕಿ: ಚಾಲಕ ಗಂಭೀರ, ಪ್ರಯಾಣಿಕರಿಗೆ ಗಾಯ

Oct 1, 2026 - 21:53
 0  231
ಶಿರಸಿ–ಕುಮಟಾ ರಸ್ತೆಯ ಸಂಪಖಂಡ ಬಳಿ ಕಾರು ಮರಕ್ಕೆ ಡಿಕ್ಕಿ: ಚಾಲಕ ಗಂಭೀರ, ಪ್ರಯಾಣಿಕರಿಗೆ ಗಾಯ

ಆಪ್ತ ನ್ಯೂಸ್ ಶಿರಸಿ:

ಶಿರಸಿ–ಕುಮಟಾ ರಸ್ತೆಯ ಸಂಪಖಂಡ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಾರಿನಲ್ಲಿದ್ದ ಇತರ ಪ್ರಯಾಣಿಕರೂ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು ಮೂಲದ ಪ್ರಯಾಣಿಕರು ಶಿರಸಿಯಿಂದ ಕುಮಟಾ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಂಪಖಂಡ ಸಮೀಪ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಇತರ ಪ್ರಯಾಣಿಕರಿಗೂ ಗಾಯಗಳಾಗಿವೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ಆರೋಗ್ಯ ಸ್ಥಿತಿ ಹಾಗೂ ಅಪಘಾತಕ್ಕೆ ನಿಖರ ಕಾರಣದ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0