ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದೀರಾ? ಇನ್ಮೇಲೆ ಹೀಗೆ ಮಾಡದೇ ಇದ್ದರೆ ಎಚ್ಚರ
ಆಪ್ತ ನ್ಯೂಸ್ ಬೆಂಗಳೂರು:
ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ, ಕೇಂದ್ರ ಮೋಟಾರು ವಾಹನ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರವನ್ನು ನಿರ್ದೇಶಿಸಿದೆ.
ಒಂಬತ್ತು ತಿಂಗಳಿನಿಂದ ನಾಲ್ಕು ವರ್ಷದೊಳಗಿನ ಮಕ್ಕಳು ಹಿಂಬದಿ ಸವಾರರಾಗಿ ಪ್ರಯಾಣಿಸುತ್ತಿದ್ದರೆ, ಅವರೂ ಕೂಡಾ ಹೆಲ್ಮೆಟ್ ಧರಿಸುವುದು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಕಡ್ಡಾಯ ಎಂದು ನ್ಯಾಯಪೀಠ ಹೇಳಿತು. ಈ ಕುರಿತು ಜನಜಾಗೃತಿ ಕಾರ್ಯಗಳನ್ನೂ ನಿಯಮಿತವಾಗಿ ಹಮ್ಮಿಕೊಳ್ಳಬೇಕು ಎಂದು ಸುಪರಿ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಈ ಸೂಚನೆ ಶಿವಮೊಗ್ಗದ ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಕೆ. ಅರ್ಚನಾ ಭಟ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಪ್ರಯುಕ್ತ ನಿರ್ದೇಶನ ಹೊರಬಂದಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಮಾರುಕಟ್ಟೆಯಲ್ಲಿ ಸುರಕ್ಷತಾ ಸಲಕರಣೆಗಳು ಲಭ್ಯವಿರುವುದು ಖಚಿತವಾದ ನಂತರ, ಈ ನಿಯಮಗಳ ಜಾರಿಗೆ ನ್ಯಾಯಪೀಠ ಆರು ತಿಂಗಳ ಅವಧಿಯನ್ನು ನಿಗದಿಪಡಿಸಿದೆ. ಸದ್ಯದವರೆಗೆ ಅಧಿಕಾರಿಗಳು ಕೆಲವು ಕ್ರಮ ಕೈಗೊಂಡಿದ್ದರೂ, ನಿಯಮಗಳ ಕಟ್ಟುನಿಟ್ಟಾದ ಅನುಷ್ಠಾನ ಆಗದೇ ಉಳಿದಿದೆ. ಆದ್ದರಿಂದ ಸರ್ಕಾರ ಶೀಘ್ರದಲ್ಲೇ ಪರಿಣಾಮಕಾರಿ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕೆಂದು ನ್ಯಾಯಪೀಠ ಒತ್ತಾಯಿಸಿದೆ.
ಕೇಂದ್ರ ಮೋಟಾರು ವಾಹನ ನಿಯಮಗಳ ಪ್ರಕಾರ, ನಾಲ್ಕು ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಹಿಂಬದಿ ಸವಾರರನ್ನಾಗಿ ಕರೆದುಕೊಂಡು ಹೋಗುವ ವೇಳೆ, ಗರಿಷ್ಠ ವೇಗವನ್ನು ಗಂಟೆಗೆ 40 ಕಿಲೋಮೀಟರ್‌ಗೆ ಮಿತಿಗೊಳಿಸಲಾಗಿದೆ ಮತ್ತು ಪರಿಣಾಮಕಾರಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆಯೂ ಸ್ಪಷ್ಟಪಡಿಸಲಾಗಿದೆ
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



