9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ; ಕಾರಣ ನಿಗೂಢ, ತನಿಖೆ ಆರಂಭ

Jul 3, 2026 - 08:30
 0  243
9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ; ಕಾರಣ ನಿಗೂಢ, ತನಿಖೆ ಆರಂಭ

ಆಪ್ತ ನ್ಯೂಸ್ ದಾಂಡೇಲಿ:

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ವ್ಯಾಪ್ತಿಯ ನವಗ್ರಾಮ ಗೌಟನದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಗುರುವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಸುಹಾಸ್ ಸಂತೋಷ್ ಲಮಾಣಿ (14) ಎಂದು ಗುರುತಿಸಲಾಗಿದೆ. ಆತ ಸ್ಥಳೀಯ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಈ ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಇಷ್ಟು ಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿ ಇಂತಹ ತೀವ್ರ ನಿರ್ಧಾರಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ಹಿಂದಿನ ನೈಜ ಕಾರಣ ಪತ್ತೆಹಚ್ಚಲು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಈ ಸಂಬಂಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0