ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಅ. 31 ರಂದು ಶಾಸಕರ ನೇತೃತ್ವದಲ್ಲಿ ಪೂರ್ವ ಸಿದ್ದತಾ ಸಭೆ
ಆಪ್ತ ನ್ಯೂಸ್ ದಾಂಡೇಲಿ:
ಡಿಸೆಂಬರ ಎರಡನೆ ವಾರದಲ್ಲಿ ದಾಂಡೇಲಿಯಲ್ಲಿ ನಡೆಸಲು ಉದ್ದೇಶಿಸಿರುವ ಉತ್ತರ ಕನ್ನಡ ಜಿಲ್ಲಾ 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ದತಾ ಸಭೆ ಹಾಗೂ ಸ್ವಾಗತ ಸಮಿತಿ ರಚನಾ ಸಭೆಯು ಅಕ್ಟೋಬರ 31, ಶುಕ್ರವಾರ ಸಂಜೆ 4.30 ಗಂಟೆಗೆ ದಾಂಡೇಲಿಯ ತಾಲೂಕು ಆಡಳಿತ ಸೌಧದ ಸಭಾ ಭವನದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ, ಶಾಸಕರೂ ಆದ ಆರ್.ವಿ. ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಯಲ್ಲಿ ದಾಂಡೇಲಿ ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ದಾಂಡೇಲಿ ಹಾಗೂ ಹಳಿಯಾಳದ ತಹಶೀಲ್ದಾರರು, ಪೌರಾಯುಕ್ತರು, ತಾಂ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಈ ಸಭೆಯಲ್ಲಿ ದಾಂಡೇಲಿ ಹಾಗೂ ಹಳಿಯಾಳ ತಾಲೂಕಿನ ಎಲ್ಲ ಇಲಾಖಾ ಅಧಿಕಾರಿಗಳು, ಜನಪ್ರತಿನಿದಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಕನ್ನಡಪರ ಸಂಘಟನೆಯ ಪದಾಧಿಕಾರಿಗಳು, ಶಾಲಾ, ಕಾಲೇಜು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು, ಹಿರಿ-ಕಿರಿಯ ಸಾಹಿತಿಗಳು, ನಾಗರಿಕ ಪ್ರಮುಖರು, ಮಾಧ್ಯಮ ಪ್ರತಿನಿದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



