ಜಿಲ್ಲಾ ಕಸಾಪ ವತಿಯಿಂದ  'ಕನ್ನಡ ಕಾರ್ತಿಕ: ಅನುದಿನ ಅನುಸ್ಪಂದನ'  ಕಾರ್ಯಕ್ರಮಕ್ಕೆ ಚಾಲನೆ

Nov 2, 2025 - 16:14
 0  27
ಜಿಲ್ಲಾ ಕಸಾಪ ವತಿಯಿಂದ  'ಕನ್ನಡ ಕಾರ್ತಿಕ: ಅನುದಿನ ಅನುಸ್ಪಂದನ'  ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ನ್ಯೂಸ್ ದಾಂಡೇಲಿ:

ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಡಿ ನವೆಂಬರ್ ತಿಂಗಳಿಡಿ ಜಿಲ್ಲೆಯಾದ್ಯಂತ ನಡೆಯಲಿರುವ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ಕಾರ್ಯಕ್ರಮಕ್ಕೆ ದಾಂಡೇಲಿ ನಗರದ ಸಾಹಿತ್ಯ ಭವನದಲ್ಲಿ ಚಾಲನೆಯನ್ನು ನೀಡಲಾಯಿತು.

ಕಾರ್ಯಕ್ರಮಕ್ಕೆ ನಗರ ಠಾಣೆಯ ಪಿಎಸ್ಐ ಕಿರಣ್ ಪಾಟೀಲ್ ಅವರು ಚಾಲನೆಯನ್ನು ನೀಡಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕನ್ನಡವನ್ನು ಕಟ್ಟುವ ಹಾಗೂ ಕನ್ನಡವನ್ನು ಸದೃಢಗೊಳಿಸುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದೆ ಎಂದರು. ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಐತಿಹಾಸಿಕ ಸಮ್ಮೇಳನವನ್ನಾಗಿಸಲು ನಾವು ನೀವೆಲ್ಲರೂ ಕನ್ನಡದ ಮನಸುಗಳು ಒಂದಾಗಿ ಶ್ರದ್ಧಾಪೂರ್ವಕವಾಗಿ ಶ್ರಮಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ ಕಳೆದ 4 ವರ್ಷಗಳಿಂದ ನಾವು ಕನ್ನಡ ಕಾರ್ತಿಕ ಕಾರ್ಯಕ್ರಮವನ್ನು ನವಂಬರ್ ತಿಂಗಳಲ್ಲಿ ಹಮ್ಮಿಕೊಂಡು ಬಂದಿದ್ದು, ಇದು ಜನಮನವನ್ನು ತಲುಪುವಲ್ಲಿ ಸಾಧ್ಯವಾಗಿದೆ.  ಆ ಮೂಲಕ ರಾಜ್ಯೋತ್ಸವದ ತಿಂಗಳಿಡಿ ಜಿಲ್ಲೆಯಲ್ಲಿ ಕನ್ನಡದ ಕಂಪು ಹರಡುವ ಕೆಲಸವಾಗುತ್ತಿದೆ ಎಂದರು. 

ಮುಖ್ಯ ಅತಿಥಿಗಳಾಗಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ,  ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಬುದವಂತ ಗೌಡ ಪಾಟೀಲ್, ಪತ್ರಕರ್ತ ಸಂದೇಶ್ ಎಸ್. ಜೈನ್ ಮತ್ತು ಸುಧಾ ಆನಂದಕುಮಾರ್ ನಾಯ್ಕ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಸಾಪ ತಾಲೂಕು ಘಟಕದ ಕೋಶಾಧಿಕಾರಿ ಶ್ರೀಮಂತ‌ ಮದರಿ ಸ್ವಾಗತಿಸಿದ ಕಾರ್ಯಕ್ರಮಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಮುರ್ತುಜಾ ಹುಸೇನ ಆನೆಹೊಸೂರ  ವಂದಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಪದಾಧಿಕಾರಿಗಳು, ಕಸಾಪ ಆಜೀವ ಸದಸ್ಯರು ಹಾಗೂ ಕನ್ನಡಪರ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0