ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ದೃಷ್ಟಿ ನಕುಲ್ ಕಾಮತ್ ಆಯ್ಕೆ
ಆಪ್ತ ನ್ಯೂಸ್ ದಾಂಡೇಲಿ:
ರಾಯಚೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಾಂಡೇಲಿ ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿನಿ ದೃಷ್ಟಿ ನಕುಲ್ ಕಾಮತ್ ಇವಳು ಅತ್ಯುತ್ತಮ ಪ್ರದರ್ಶನವನ್ನು ನೀಡಿ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕಳೆದ ವರ್ಷವೂ ದೃಷ್ಟಿ ನಕುಲ್ ಕಾಮತ್ ಇವಳು ರಾಜ್ಯಮಟ್ಟವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಇವಳು ನಗರದ ಉದ್ಯಮಿ ನಕುಲ್ ಕಾಮತ್ ಮತ್ತು ಶಿಕ್ಷಕಿ ಕವಿತಾ ಕಾಮತ್ ದಂಪತಿಗಳ ಸುಪುತ್ರಿಯಾಗಿದ್ದಾಳೆ.
ಇವಳ ಸಾಧನೆಗೆ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಶಿರಸಿ ಶೈಕ್ಷಣಿಕ ಕೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜನತಾ ವಿದ್ಯಾಲಯದ ಆಡಳಿತಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಜನತಾ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಜನತಾ ವಿದ್ಯಾಲಯ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಮತ್ತು ಜನತಾ ವಿದ್ಯಾಲಯ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ನಗರದ ಗಣ್ಯರನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
1
Wow
0



