ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ: ಲೈಸೆನ್ಸ್ ರದ್ದು

Oct 28, 2025 - 09:10
 0  26
ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ: ಲೈಸೆನ್ಸ್ ರದ್ದು

ಆಪ್ತ ನ್ಯೂಸ್ ಶಿರಸಿ:

ಇತ್ತಿಚಿನ ದಿನಗಳಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸುವ ವೇಳೆ ರಸ್ತೆ ಅಪಘಾತಕ್ಕೆ ಒಳಗಾಗಿ ಸಾವು ನೋವುಗಳಿಗೆ ತುತ್ತಾಗುವವರ ಸಂಖ್ಯೆ ಹೆಚ್ಚುತ್ತಿದೆ.ಈ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಮುಂದಾದ ಶಿರಸಿ‌ ನಗರ ಠಾಣೆಯ ಪೊಲೀಸರು ಇಂದು ವಿಶೇಷ ಡ್ರೈವ್ ಹಮ್ಮಿಕೊಂಡು ಮೊಬೈಲ್ ನಲ್ಲಿ ಮಾತನಾಡುತ್ತಾ ಅಪಾಯಕಾರಿಯಾಗಿ ವಾಹನ ಚಲಾಯಿಸುವ ಸವಾರರ ಮೇಲೆ ಒಟ್ಟು ಆರು ಪ್ರಕರಣಗಳನ್ನು ದಾಖಲಿಸಿ 9000 ರೂ ದಂಡ ವಿಧಿಸಿದ್ದಾರೆ. ಅಲ್ಲದೆ ಸಂಚಾರ ನಿಯಮ ಉಲ್ಲಂಘಿಸಿದ ಸವಾರರ ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಶಿರಸಿರವರಿಗೆ ಪತ್ರ ಬರೆದಿದ್ದಾರೆ.
ಶಿರಸಿ ಉಪವಿಭಾಗದ ಡಿಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮತ್ತು ಸಿಪಿಆಯ್ ಶಶಿಕಾಂತ ವರ್ಮಾರವರ ಮಾರ್ಗದರ್ಶ ಹಾಗು ಶಿರಸಿ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿರವರ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಎಎಸ್ಐರವರಾದ ನೆಲ್ಸನ್ ಮೆಂಥಾರೋ, ಸುರೇಶ ಗೊಂಜಾಳಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0