ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಆತ್ಮಹತ್ಯೆ
ಆಪ್ತ ನ್ಯೂಸ್ ಶಿರಸಿ:
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 82 ವರ್ಷದ ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ಬೊಪ್ಪನಳ್ಳಿ ಗ್ರಾಮದ ಕುರವಣಗಿಯಲ್ಲಿ ನಡೆದಿದೆ.
ಕುರವಣಗಿಯ ನಿವಾಸಿ ಕಮಲಾಕರ ರಾಮಕೃಷ್ಣ ಹೆಗಡೆ (82) ಮೃತಪಟ್ಟವರು. ಇವರು ಕಳೆದ ಹತ್ತು ವರ್ಷಗಳಿಂದ ಮೂಲವ್ಯಾಧಿ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯದಿಂದ ಉಂಟಾಗಿದ್ದ ನೋವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಮೃತರ ಪುತ್ರ ನೀಡಿದ ದೂರಿನ ಮೇರೆಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0