ಮಗ-ಸೊಸೆ ಅಪಘಾತದಲ್ಲಿ ಸಾವು: ಮನನೊಂದ ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ
ಆಪ್ತ ನ್ಯೂಸ್ ಕುಮಟಾ:
ಮಗ ಮತ್ತು ಸೊಸೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನೋವನ್ನು ಸಹಿಸಿಕೊಳ್ಳಲಾಗದೆ ಮನನೊಂದಿದ್ದ 80 ವರ್ಷದ ವೃದ್ಧೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಧಾರೇಶ್ವರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶ್ರೀಮತಿ ಪಾರ್ವತಿ ಹನುಮಂತ ನಾಯ್ಕ್ (80) ಎಂದು ಗುರುತಿಸಲಾಗಿದೆ.
ಕುಟುಂಬದ ಮೂಲಗಳ ಪ್ರಕಾರ, ಕೆಲವು ದಿನಗಳ ಹಿಂದೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಪಾರ್ವತಿ ನಾಯ್ಕ್ ಅವರ ಮಗ ಹಾಗೂ ಸೊಸೆ ಮೃತಪಟ್ಟಿದ್ದರು. ಈ ದುರಂತದ ಬಳಿಕ ಅವರು ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದು, ಮಗ-ಸೊಸೆಯ ಅಗಲಿಕೆಯನ್ನು ಮರೆತು ಸಾಮಾನ್ಯ ಜೀವನಕ್ಕೆ ಮರಳಲು ಸಾಧ್ಯವಾಗದೆ ತೀವ್ರ ದುಃಖದಲ್ಲಿ ದಿನಗಳನ್ನು ಕಳೆಯುತ್ತಿದ್ದರು ಎನ್ನಲಾಗಿದೆ.
ಈ ಮಧ್ಯೆ, ಜುಲೈ 19ರಂದು ತಮ್ಮ ಮನೆಯ ಪಕ್ಕದ ಜಾಗೆಯಲ್ಲಿರುವ ನೆಲಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳೀಯರು ಮತ್ತು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



