ನಾಳೆ (ಜುಲೈ 7) ಶಾಲೆಗಳಿಗೆ ರಜೆ ಘೋಷಣೆ
ಆಪ್ತ ನ್ಯೂಸ್ ಶಿರಸಿ:
ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ನಿರಂತರ ಮಳೆ ಮತ್ತು ಸಂಭವನೀಯ ಅವಘಡಗಳ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಜುಲೈ 7 (ಮಂಗಳವಾರ) ರಂದು ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿದ್ದಾರೆ.
ಮಕ್ಕಳಿಗೆ ಯಾವುದೇ ಅನಾನುಕೂಲ ಅಥವಾ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದ್ದು, ರಜೆ ಜುಲೈ 7 ರಂದು ಮಾತ್ರ ಅನ್ವಯವಾಗಲಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

