ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಪಾಲ್ಗೊಂಡ ಸಾಧಕರಿಗೆ ಸನ್ಮಾನ
ಆಪ್ತ ನ್ಯೂಸ್ ಸಾಗರ:
ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಗರಸಭೆ ವತಿಯಿಂದ ಷಟಲ್ ಬ್ಯಾಡ್ಮಿಂಟನ್ ಜ್ಯೂನಿಯರ್ ವಿಭಾಗದಲ್ಲಿ ಚೀನಾದಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಪಾಲ್ಗೊಂಡ ಕೆ.ಆರ್. ವಿಭವ, ರಾಷ್ಟ್ರೀಯ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿಶೇಷ ಸಾಧನೆ ಮಾಡಿದ ಮುಂಗರವಳ್ಳಿ ಚೈತನ್ಯ ವಿಶೇಷ ಶಿಕ್ಷಣ ಸಂಸ್ಥೆಯ ಶರತ್ ಶೆಟ್ಟಿ, ಲೀಲಾವತಿ, ಅನುಷಾರನ್ನು ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಪೌರಾಯುಕ್ತ ಎಚ್.ಕೆ. ನಾಗಪ್ಪ, ಸದಸ್ಯರಾದ ಗಣೇಶ್ ಪ್ರಸಾದ್, ಮಧುಮಾಲತಿ, ಗಣಪತಿ ಮಂಡಗಳಲೆ, ಲಲಿತಮ್ಮ, ಸೈಯದ್ ಜಾಕೀರ್, ಶ್ರೀನಿವಾಸ್, ಪ್ರೇಮ ಸಿಂಗ್ ಇನ್ನಿತರರು ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



