ಸಾಲಬಾಧೆ ತಾಳಲಾರದೆ ಹೋಟೆಲ್ ಉದ್ಯಮಿ ಆತ್ಮಹತ್ಯೆ: ಕಾಳಿ ನದಿಯ ಹಿನ್ನೀರಿನಲ್ಲಿ ಶವ ಪತ್ತೆ
ಆಪ್ತ ನ್ಯೂಸ್ ಕಾರವಾರ:
ಹೋಟೆಲ್ ವ್ಯವಹಾರದಲ್ಲಿ ಉಂಟಾದ ಅಪಾರ ನಷ್ಟ ಹಾಗೂ ಸಾಲಬಾಧೆಯಿಂದ ಮನನೊಂದು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಾರವಾರದ ಹಣಕೋಣ ಪ್ರದೇಶದಲ್ಲಿ ನಡೆದಿದೆ.
ಕಾರವಾರದ ಗೋಲ್ಡನ್ ಆರ್ಕೇಡ್ ನಿವಾಸಿ ಸತೀಶ ಲಕ್ಷ್ಮಣ ಮಾಳಸೇಕರ್ (56) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಜೂನ್ 17ರಂದು ಬೆಳಿಗ್ಗೆ ಮನೆಯಿಂದ ಕಾರಿನಲ್ಲಿ ಹೊರಟಿದ್ದ ಸತೀಶ್ ಅವರು ಬಳಿಕ ಮನೆಗೆ ಮರಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಹಣಕೋಣದ ರಿವರ್ ಎಡ್ಜ್ ರೆಸಾರ್ಟ್ಗೆ ತೆರಳಿ ಅಲ್ಲಿಂದ ಸಣ್ಣ ದೋಣಿಯನ್ನು ಪಡೆದು ಕಾಳಿ ನದಿಯ ಹಿನ್ನೀರಿನತ್ತ ತೆರಳಿದ್ದರು ಎನ್ನಲಾಗಿದೆ.
ಜೂನ್ 18ರಂದು ಕಾಳಿ ನದಿಯ ಹಿನ್ನೀರಿನಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಈ ಸಂಬಂಧ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
What's Your Reaction?
Like
1
Dislike
1
Love
0
Funny
0
Angry
0
Sad
0
Wow
0



