ಅಕ್ರಮವಾಗಿ ಶ್ರೀಗಂಧದ ಮರ ಕಡಿತ: ನಾಲ್ವರು ಆರೋಪಿಗಳ ಬಂಧನ

Oct 8, 2026 - 21:08
 0  216
ಅಕ್ರಮವಾಗಿ ಶ್ರೀಗಂಧದ ಮರ ಕಡಿತ: ನಾಲ್ವರು ಆರೋಪಿಗಳ ಬಂಧನ

ಆಪ್ತ ನ್ಯೂಸ್ ಶಿರಸಿ:

ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಜಾತಿಯ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಬನವಾಸಿ ವಲಯ ಅರಣ್ಯಾಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಶಿರಸಿ ಉಂಬಳೆಕೊಪ್ಪದ ಸಂತೋಷ ಸಣ್ಯಾ ನಾಯ್ಕ, ನವೀನ ಚಂದ್ರಶೇಖರ ದೇವಾಡಿಗ, ಮಂಜುನಾಥ ಮಾದೇವ ಗೌಡ ಹಾಗೂ ಮಂಡಿಗೆಹಳ್ಳಿಯ ಜನಾರ್ಧನ ಗಣಪತಿ ಗೌಡ ಎಂದು ಗುರುತಿಸಲಾಗಿದೆ.

ಗೋಳಿಕಟ್ಟಾ ಅರಣ್ಯದಲ್ಲಿ ಮರ ಕಡಿತ ಆರೋಪ

ಬನವಾಸಿ ವಲಯದ ಗೋಳಿಕಟ್ಟಾ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಜಾತಿಗೆ ಸೇರಿದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಕಡಿದ ಶ್ರೀಗಂಧದ ಮರದ ಬುಡಚಿ ಹಾಗೂ ನಗಗಳನ್ನು ಅರಣ್ಯಾಧಿಕಾರಿಗಳು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ, ಅಕ್ರಮ ಮರ ಕಡಿತ ಹಾಗೂ ಸಾಗಾಟದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ ಸೂರ್ಯವಂಶಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಮಿತ್ ಚಹ್ವಾಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.

ಬನವಾಸಿ ವಲಯ ಅರಣ್ಯಾಧಿಕಾರಿ ಕಾರ್ತಿಕ ಕಾಂಬಳಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಇತರ ಸಿಬ್ಬಂದಿ ಭಾಗವಹಿಸಿದ್ದರು.

ಶ್ರೀಗಂಧ ಸೇರಿದಂತೆ ಬೆಲೆಬಾಳುವ ಅರಣ್ಯ ಸಂಪತ್ತಿನ ಅಕ್ರಮ ಕಡಿತ ಮತ್ತು ಸಾಗಾಟದ ವಿರುದ್ಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0