ಜೋಯಿಡಾದ ಜಗಲ್‌ಬೆಟ್ ಬಳಿ ಭೀಕರ ಅಪಘಾತ: KSRTC ಬಸ್‌ಗೆ ಬೈಕ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

Jul 17, 2026 - 13:34
 0  62
ಜೋಯಿಡಾದ ಜಗಲ್‌ಬೆಟ್ ಬಳಿ ಭೀಕರ ಅಪಘಾತ: KSRTC ಬಸ್‌ಗೆ ಬೈಕ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

ಆಪ್ತ ನ್ಯೂಸ್ ಜೋಯಿಡಾ:

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಜಗಲ್‌ಬೆಟ್ ಸಮೀಪದ ಕೇಳಿಪಾಣಿ ವ್ಯೂ ಪಾಯಿಂಟ್ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಾಹಿತಿಯ ಪ್ರಕಾರ, ದಾಂಡೇಲಿಯಿಂದ ರಾಮನಗರದ ಕಡೆಗೆ ಬರುತ್ತಿದ್ದ KSRTC ಬಸ್‌ಗೆ, ಗೋಕರ್ಣದತ್ತ ತೆರಳುತ್ತಿದ್ದ ಕೊಲ್ಹಾಪುರ ಮೂಲದ ಚೇತನ್ (27) ಎಂಬ ಯುವಕ ಅತಿವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ಎದುರಿನಿಂದ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ಆತನ ಕಾಲಿನ ಮೇಲೆ ಬಸ್ ಹರಿದ ಪರಿಣಾಮ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಹಾಗೂ ಸಾರ್ವಜನಿಕರ ಸಹಾಯದಿಂದ ಗಾಯಾಳುವನ್ನು ತಕ್ಷಣ ರಾಮನಗರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿದು ರಾಮನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಬೈಕ್ ಅತಿವೇಗ ಹಾಗೂ ನಿಯಂತ್ರಣ ತಪ್ಪಿದ ಕಾರಣ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಚಾಲಕರು ಘಾಟ್ ರಸ್ತೆಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0