ಹೆಂಡತಿ ಹೊರ ಹಾಕಿದವ ಎರಡು ವರ್ಷದ ನಂತರ ಅರೆಸ್ಟ್

ಆಪ್ತ ನ್ಯೂಸ್ ಮುಂಡಗೋಡ:
ಮಹಿಳೆಯೊಬ್ಬರನ್ನು ಮದುವೆಯಾಗಿ ಕೆಲವೇ ತಿಂಗಳಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ ಪ್ರಕರಣದಲ್ಲಿ, ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.
ಅರ್ಫಾಜ ಅಹ್ಮದ್ ಹುಸೇನ್ ಮಿರ್ಜಾನಕರ್ ಬಂಧಿತ ಆರೋಪಿಯಾಗಿದ್ದಾನೆ.ಈತನ ವಿರುದ್ಧ ಈತನ ಹೆಂಡತಿ 2022ರಲ್ಲಿ ಪೊಲೀಸ್ ದೂರು ದಾಖಲಿಸಿದ್ದರು.
ಮದುವೆಯಾದ ಕೆಲವೇ ತಿಂಗಳಲ್ಲಿ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿ ಆಕೆಯಿಂದ ಬಂಗಾರ ಕಸಿದು ಮನೆಯಿಂದ ಹೊರ ಹಾಕಿದ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದರು.ಆದರೆ ಆರೋಪಿತ ಅರ್ಫಾಜ್ ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. 2 ವರ್ಷಗಳಿಂದ ಹೊರ ದೇಶದಲ್ಲಿ ಇದ್ದ ಆರೋಪಿಯ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು.
ಅರ್ಫಾಜ್, ಮುಂಬೈ ಬರುವ ಸೂಚನೆ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಮುಂಡಗೋಡ ಪೊಲೀಸರ ಸಾಧನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಮ್ ಶ್ಲಾಘಿಸಿದ್ದಾರೆ.
What's Your Reaction?






