ಕೃಷಿ ಕೆಲಸದ ವೇಳೆ ದುರಂತ: ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು
ಆಪ್ತ ನ್ಯೂಸ್ ಕುಮಟಾ:
ತಮ್ಮ ಮನೆಯ ಹಿಂಭಾಗದ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ನೀರು ತುಂಬಿದ್ದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಶಿರಗುಂಜಿ-ಕತಗಾಲ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗೋಪಾಲಕೃಷ್ಣ ವಿಷ್ಣು ಭಟ್ (58) ಎಂದು ಗುರುತಿಸಲಾಗಿದೆ.
ಜುಲೈ 9ರಂದು ಬೆಳಿಗ್ಗೆ ಗೋಪಾಲಕೃಷ್ಣ ಭಟ್ ಅವರು ತಮ್ಮ ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದ ತೋಟದಲ್ಲಿದ್ದ ಬಾವಿಯಲ್ಲಿ ನೀರು ತುಂಬಿಕೊಂಡಿದ್ದು, ಕೆಲಸದ ನಡುವೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ನೀರಿನಲ್ಲಿ ಮುಳುಗಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮೃತರ ಪತ್ನಿ ಜಯಲಕ್ಷ್ಮಿ ಗೋಪಾಲಕೃಷ್ಣ ಭಟ್ ಅವರು ನೀಡಿದ ದೂರಿನ ಆಧಾರದ ಮೇಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಭಾರೀ ಮಳೆಯ ಸಂದರ್ಭದಲ್ಲಿ ಬಾವಿ, ಕೆರೆ ಹಾಗೂ ಜಲಾಶಯಗಳ ಸುತ್ತಮುತ್ತ ಕೃಷಿ ಕೆಲಸ ಮಾಡುವವರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



