ಮರಾಠಿಕೊಪ್ಪ ವಿದ್ಯಾನಗರದಲ್ಲಿ ವ್ಯಕ್ತಿಯ ಶವ ಪತ್ತೆ

3–4 ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ; ಸಾವಿನ ಕಾರಣ ನಿಗೂಢ

Sep 18, 2026 - 09:15
 0  280
ಮರಾಠಿಕೊಪ್ಪ ವಿದ್ಯಾನಗರದಲ್ಲಿ ವ್ಯಕ್ತಿಯ ಶವ ಪತ್ತೆ

ಆಪ್ತ ನ್ಯೂಸ್ ಶಿರಸಿ:

ನಗರದ ಮರಾಠಿಕೊಪ್ಪ ವಿದ್ಯಾನಗರದ ಭಾಸ್ಕರ ಹೆಗಡೆ ಚಾಳನಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ವಿದ್ಯಾನಗರ ನಿವಾಸಿ ಸುಬ್ರಹ್ಮಣ್ಯ ಮುರುಗೇಶಿ ಇಳಿಗೆರ (46) ಎಂದು ಗುರುತಿಸಲಾಗಿದೆ.

ಸುಬ್ರಹ್ಮಣ್ಯ ಅವರು ಬಾರ್ ಬೆಂಡಿಂಗ್ ವೃತ್ತಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ಅವರು ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಅನುಮಾನ ಮೂಡಿತ್ತು ಎನ್ನಲಾಗಿದೆ.

ಗುರುವಾರ ರಾತ್ರಿ ಭಾಸ್ಕರ ಹೆಗಡೆ ಚಾಳನಲ್ಲಿರುವ ಅವರ ವಾಸಸ್ಥಳದಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ, ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೃತದೇಹದ ಸ್ಥಿತಿಯನ್ನು ಗಮನಿಸಿದ ಪೊಲೀಸರು, ಸುಮಾರು 3ರಿಂದ 4 ದಿನಗಳ ಹಿಂದೆ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕವಾಗಿ ಶಂಕಿಸಿದ್ದಾರೆ.

ಮಾಹಿತಿ ತಿಳಿದು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪಿಎಸ್ಐ ಬಸವರಾಜ ಕನಶೆಟ್ಟಿ ಅವರ ನೇತೃತ್ವದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸ್ ತನಿಖೆ ಹಾಗೂ ಅಗತ್ಯ ವೈದ್ಯಕೀಯ ಪರೀಕ್ಷೆಯ ಬಳಿಕ ಸಾವಿನ ಕಾರಣ ಸ್ಪಷ್ಟವಾಗುವ ನಿರೀಕ್ಷೆಯಿದೆ. ಘಟನೆ ಕುರಿತು ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಮುಂದಿನ ತನಿಖೆ ನಡೆಯುತ್ತಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0