ಕ್ರಿಕೆಟ್ ಪ್ರತಿಭೆ ಪ್ರವೀಣ ಹೆಗಡೆ ಬೂಸಾ ನಿಧನ: ಶಾಸಕ ಭೀಮಣ್ಣ ನಾಯ್ಕ ತೀವ್ರ ಸಂತಾಪ
ಆಪ್ತ ನ್ಯೂಸ್ ಶಿರಸಿ/ಸಿದ್ಧಾಪುರ:
ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಯುವ ಕ್ರಿಕೆಟ್ ಆಟಗಾರ ಪ್ರವೀಣ ಹೆಗಡೆ ಅವರ ಆಕಸ್ಮಿಕ ನಿಧನ ಕ್ರೀಡಾ ವಲಯದಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಅವರ ಅಗಲಿಕೆಗೆ ಶಿರಸಿ-ಸಿದ್ಧಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಶೋಕ ಸಂದೇಶ ನೀಡಿರುವ ಶಾಸಕ ಭೀಮಣ್ಣ ನಾಯ್ಕ, ಪ್ರವೀಣ ಹೆಗಡೆ ಅವರು ಭವಿಷ್ಯದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಅಪಾರ ಸಾಮರ್ಥ್ಯ ಹೊಂದಿದ್ದ ಪ್ರತಿಭಾವಂತ ಕ್ರೀಡಾಪಟುವಾಗಿದ್ದರು ಎಂದು ಸ್ಮರಿಸಿದ್ದಾರೆ.
“ಪ್ರವೀಣ ಹೆಗಡೆ ಅವರು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬಾಳಿ ಬೆಳಗಬೇಕಿದ್ದ ಅದ್ಭುತ ಕ್ರೀಡಾ ಪ್ರತಿಭೆಯಾಗಿದ್ದರು. ಅವರ ಅಕಾಲಿಕ ನಿಧನವು ಉತ್ತರ ಕನ್ನಡ ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ,” ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರವೀಣ ಅವರ ನಿಧನದಿಂದ ಕುಟುಂಬದವರು ಮಾತ್ರವಲ್ಲದೆ, ಸ್ನೇಹಿತರು, ಕ್ರೀಡಾಭಿಮಾನಿಗಳು ಹಾಗೂ ಜಿಲ್ಲೆಯ ಕ್ರೀಡಾ ವಲಯವೇ ಶೋಕ ಸಾಗರದಲ್ಲಿ ಮುಳುಗಿದೆ ಎಂದು ಶಾಸಕರು ಹೇಳಿದ್ದಾರೆ.
“ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ಕುಟುಂಬ ಸದಸ್ಯರಿಗೆ ಹಾಗೂ ಅವರ ಅಸಂಖ್ಯಾತ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಭೀಮಣ್ಣ ನಾಯ್ಕ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರವೀಣ ಹೆಗಡೆ ಅವರ ಅಕಾಲಿಕ ನಿಧನವು ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಆಘಾತ ಉಂಟುಮಾಡಿದ್ದು, ಅವರ ಸಾಧನೆಗಳು ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ.
What's Your Reaction?
Like
1
Dislike
0
Love
0
Funny
0
Angry
0
Sad
2
Wow
0



