ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ ಆಯ್ಕೆ

Oct 12, 2025 - 21:01
 0  30
ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ ಆಯ್ಕೆ

ಆಪ್ತ ನ್ಯೂಸ್ ಜೋಯಿಡಾ:

ತಾಲೂಕಿನ ಜಿಲ್ಲಾ ಪಂಚಾಯತ ಉತ್ತರಕನ್ನಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿದ್ದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಕ್ರೀಡಾಂಗಣ ಸಿದ್ದಾಪುರದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲೆಯ14 ವರ್ಷ ವಯೋಮಿತಿ ಒಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ 2025 - 26 ರ ಗುಂಪು ಆಟ ಕಬಡ್ಡಿ ಪಂದ್ಯಾವಳಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜೋಯಿಡಾ ಹಾಗೂ ರಾಣಿ ಚೆನ್ನಮ್ಮ ವಸತಿ ಶಾಲೆ ರಾಮನಗರದ ವಿದ್ಯಾರ್ಥಿನಿಯರು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.                              
ಈ ಸಾಧನೆಯನ್ನು ಮಾಡಿದ ವಿದ್ಯಾರ್ಥಿನಿಯರಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ವೀರೇಶ ನಿಡವಣಿ ಹಾಗೂ ರಾಣಿ ಚೆನ್ನಮ್ಮ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ ಬೀರನಹೊಳಿ ಇವರಿಗೆ ಪ್ರಾಂಶುಪಾಲರಾದ ಗಿರೀಶ ಕುಮಾರ ಹಿರೇಮಠ ಹಾಗೂ ಸಿಬ್ಬಂದಿ ವರ್ಗದವರು, ರಾಣಿ ಚೆನ್ನಮ್ಮ ವಸತಿ ಶಾಲೆ ರಾಮನಗರದ ಪ್ರಾಂಶುಪಾಲರಾದ ಬಿ.ಎಮ್.ಮಲ್ಲೂರ ಹಾಗೂ ಸಿಬ್ಬಂದಿ ವರ್ಗದವರು, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಶೀರ್ ಅಹ್ಮದ ಶೇಖ,ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕಿ ವಿಜಯಲಕ್ಷ್ಮೀ  ಹಂಜಿ,ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಲ್ ಎಮ್ ಪಟಗಾರ,ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯಶವಂತ ನಾಯ್ಕ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಉಮೇಶ ವೈ.ಕೆ,ಗುಂದ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಫಕೀರಪ್ಪ ದರಿಗೊಂಡ,ಶಾಸ್ತ್ರೀ ಸರ,ಪಾಲಕರು, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0