ಭಟ್ಕಳ ದುರಂತ: ಮೃತರ ಮನೆಗಳಿಗೆ ಭೇಟಿ ನೀಡಿದ ಸಂಸದ ಕಾಗೇರಿ; ಕುಟುಂಬಗಳಿಗೆ ಸಾಂತ್ವನ, ಧೈರ್ಯ ತುಂಬಿದ ನಾಯಕರು
ಆಪ್ತ ನ್ಯೂಸ್ ಭಟ್ಕಳ:
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ ವೇಳೆ 11 ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ. ಈ ಹೃದಯವಿದ್ರಾವಕ ದುರಂತದಿಂದ ಹಲವು ಕುಟುಂಬಗಳು ತಮ್ಮ ಆತ್ಮೀಯರನ್ನು ಕಳೆದುಕೊಂಡಿದ್ದು, ಇಡೀ ಸಮಾಜವೇ ದುಃಖದ ಸಾಗರದಲ್ಲಿ ಮುಳುಗಿದೆ.
ಈ ದುರಂತದ ಹಿನ್ನೆಲೆ ಇಂದು ವಿಶ್ವೇಶ್ವರ ಹೆಗಡೆ ಕಾಗೇರಿ ಮೃತರು ಹಾಗೂ ಗಾಯಾಳುಗಳ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವಿನಲ್ಲಿ ಮುಳುಗಿರುವ ಕುಟುಂಬಗಳಿಗೆ ಧೈರ್ಯ ತುಂಬಿ, ಈ ಸಂಕಷ್ಟದ ಸಮಯದಲ್ಲಿ ಎಲ್ಲರೂ ಅವರೊಂದಿಗೆ ನಿಲ್ಲಬೇಕೆಂದು ಹೇಳಿದರು.
ಸಾಂತ್ವನದ ವೇಳೆ ಮಾತನಾಡಿದ ಅವರು, “ಹೋದ ಜೀವಗಳನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಈ ಕಠಿಣ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರೂ ಆ ಕುಟುಂಬಗಳ ಜೊತೆ ನಿಂತು ಬೆಂಬಲ ನೀಡಬೇಕಾಗಿದೆ” ಎಂದು ಹೇಳಿದರು.
ಮೃತರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಿದ ಅವರು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಹಾಗೂ ಈ ಅತೀವ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ಭಗವಂತನು ನೀಡಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವಾನಂದ್ ನಾಯ್ಕ್, ಮಾಜಿ ಶಾಸಕ ಸುನಿಲ್ ನಾಯ್ಕ್, ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ, ಭಟ್ಕಳ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ್ ಸೇರಿದಂತೆ ಪಕ್ಷದ ಹಲವು ಪ್ರಮುಖರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



