ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆಯೇ ಇಲ್ಲದ ನಾಯಕ ನರೇಂದ್ರ ಮೋದಿ: ದಿನಕರ ಶೆಟ್ಟಿ
ಆಪ್ತ ನ್ಯೂಸ್ ಸಿದ್ದಾಪುರ:
ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವ ಗುರುವಾಗಿ ಹೊರಹೊಮ್ಮಿದೆ. ತಮ್ಮ 25 ವರ್ಷಗಳ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಜನಸೇವೆ ಮಾಡಿದ ಧೀಮಂತ ನಾಯಕ ನರೇಂದ್ರ ಮೋದಿ ಎಂದು ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು.
ತಾಲೂಕಿನ ಬಿಳಗಿ ಸೇವಾ ಸಹಕಾರಿ ಸಂಘದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯು 25 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸೇವಾ ಸಂಕಲ್ಪ ,ಸೇವಾ ಸೇತು ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಮತ್ತು ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಕಪ್ಪು ಚುಕ್ಕೆ ಇಲ್ಲದೆ 25 ವರ್ಷಗಳ ರಾಜಕೀಯ ಜೀವನವನ್ನು ನಡೆಸಿದ್ದಾರೆ. ಮೂರು ಬಾರಿ ಗುಜರಾತ್ ನ ಮುಖ್ಯಮಂತ್ರಿ ಯಾಗಿದ್ದರು . ಸ್ವಚ್ಛತೆ ಎನು ಎಂಬುದನ್ನು ನಾವು ಗುಜರಾತನ ಅಹಮದಾಬಾದ್ ಗೆ ಹೋಗಿ ನೋಡಬೇಕು. ಅಷ್ಟು ವ್ಯವಸ್ಥೆಯನ್ನು ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರುತ್ತಿರಲಿಲ್ಲ 370 ಆರ್ಟಿಕಲ್ ನನ್ನು ರದ್ದು ಮಾಡಿ ಇಂದು ಅಲ್ಲಿಯೂ ತ್ರಿವರ್ಣ ಧ್ವಜ ಹಾರುತ್ತಿದೆ. ಇದಕ್ಕೆ ವಿರೋಧಿ ಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಮೋದಿಯವರ ದೃಢ ಸಂಕಲ್ಪ ಮುಂದಾಲೋಚನೆಯ ಫಲವಾಗಿ ಜಮ್ಮು ಕಾಶ್ಮೀರದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆ, ಆಯುಷ್ಮಾನ್ ಭಾರತ್ ಸೇರಿದಂತೆ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು .ಭಾರತೀಯ ಜನತಾ ಪಾರ್ಟಿಯ ವತಿಯಿಂದ ಉಚಿತವಾಗಿ ಇಂತಹ ಶಿಬಿರಗಳನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಶಿವಮೊಗ್ಗ ವಿಭಾಗದ ಸಪ್ರಭಾರಿ ಆರ್ ಡಿ ಹೆಗಡೆ ಮಾತನಾಡಿ, ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಮಾಡಿರುವ ಸಾಧನೆ ಹಾಗೂ ಪ್ರಧಾನಿಯಾದ ನಂತರ ಮಾಡಿದ ಸಾಧನೆಗಳನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಮೋದಿಯವರ ಆಡಳಿತವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು ಎಂಬ ಉದ್ದೇಶದಿಂದ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಇಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ಬಿಳಗಿಯಲ್ಲಿ ಕಾರ್ಯಕ್ರಮವನ್ನು ನಡೆಸಲಾಗಿದೆ.ಸ್ವಚ್ಛ ಸುಭೀಕ್ಷ ಆಡಳಿತವನ್ನು ಮೋದಿಯವರು ನೀಡುತ್ತಿದ್ದಾರೆ. ಪ್ರಧಾನ ಮಂತ್ರಿ ವಿಮಾ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದರು.ಪ್ರಧಾನ ಮಂತ್ರಿ ಭಿಮಾ ಸುರಕ್ಷಾ ಯೋಜನೆ, ಅಪಘಾತ ವಿಮೆ ಸೇರಿದಂತೆ ಹಲವು ರೀತಿಯ ಸೌಲಭ್ಯಗಳನ್ನು ನೀಡಿದ್ದಾರೆ . ಜನರು ಆರ್ಥಿಕವಾಗಿ ಸದೃಢರಾಗಲು ಜನಧನ ಯೋಜನೆ,ಮುದ್ರಾ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಜನೌಷಧ ಕೇಂದ್ರವನ್ನು ತೆರೆಯುವ ಮೂಲಕ ಬಡವರಿಗೆ ಅನುಕೂಲ ಮಾಡಿದ್ದಾರೆ. ಯಾವುದೇ ಜಾತಿ ಧರ್ಮ ಮತ ಪಂಥಗಳ ಭೇದವಿಲ್ಲದೆ ಜನ ಸೇವೆಯನ್ನು ಮೋದಿಯವರು ಮಾಡುತ್ತಿದ್ದಾರೆ. ಸಬ್ ಕಾ ಸಾಥ್ ಸಬ್ ಕಾ ಸಾಥ್ ಮಾತಿನಂತೆ ಆಡಳಿತ ನಡೆಸುತ್ತಿದ್ದಾರೆ. ಇಂದು ಭಾರತ ವಿಶ್ವ ಗುರುವಾಗಿ ಹೊರಹೊಮ್ಮಿದೆ.ಇದು ನಿಜಕ್ಕೂ ಭಾರತೀಯರು ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು.
ಬಿಜೆಪಿ ನಿಖಟ ಪೂರ್ವ ಜಿಲ್ಲಾಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಚಾಲಕ ವೇಂಕಟೆಶ ನಾಯಕ ಮಾತನಾಡಿ, ಕಳೆದ 12 ವರ್ಷಗಳಿಂದ ಪ್ರಧಾನ ಮಂತ್ರಿಯಾಗಿ ಅತ್ಯಂತ ಯಶಸ್ವಿಯಾಗಿ ದೇಶವನ್ನು ಮುನ್ನೆಡೆಸುತ್ತಿದ್ದಾರೆ. ಪಾರದರ್ಶಕತೆ ಆಡಳಿತ ನಡೆಸುತ್ತಿದ್ದಾರೆ. ದೇಶದ ಹಳಿ ತಪ್ಪಿದ ವ್ಯವಸ್ಥೆಯನ್ನು ಸರಿದಾರಿಗೆ ತರುವಲ್ಲಿ ಶ್ರಮಿಸುತ್ತಿದ್ದಾರೆ. ಸ್ವಚ್ಛ ಭಾರತ್ ಅಭಿಯಾನದಡಿ ದೇಶದಲ್ಲಿ ಕ್ರಾಂತಿಯನ್ನೇ ನಡೆಸಿದ್ದಾರೆ. ಸರ್ಕಾರದ ಸೌಲಭ್ಯಗಳು ನೇರವಾಗಿ ಜನರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ ಎಂದರು.
ಪಶ್ಚಿಮ ಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ,ನುಡಿದಂತೆ ನಡೆಯುವ ಮನುಷ್ಯ ನರೇಂದ್ರ ಮೋದಿಯವರು. 2047 ರ ಸಮಯದಲ್ಲಿ ಭಾರತ ಹೇಗಿರಬೇಕು ಎಂಬ ಕಲ್ಪನೆಯನ್ನು ನಮಗೆ ಕೊಟ್ಟಿದ್ದಾರೆ. ಅವರ ಯೋಜನೆಗಳಿಗೆ ನಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದರು.
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಕಣ್ಣಿನ ತಪಾಸಣೆ ಹಾಗೂ ಸೇವಾ ಸೇತು ಕಾರ್ಯಕ್ರಮದ ಮೂಲಕ ಆಯುಷ್ಮಾನ್ ಕಾರ್ಡ್ ವಿತರಣೆ, ಆಧಾರ ಕಾರ್ಡ್ ವಿತರಣೆ, ರೇಶನ್ ಕಾರ್ಡ್, ಪಿ.ಎಂ ಕಿಸಾನ್ ಕಾರ್ಡ್, ಸೇರಿದಂತೆ ಕೇಂದ್ರ ಸರಕಾರ ಜನಪ್ರಿಯ ಕಾರ್ಯಕ್ರಮದ ಮಾಹಿತಿಯನ್ನು ನೀಡಲಾಯಿತು.
ಶಿಬಿರದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ, ಕೆಡಿಸಿಸಿ ಬ್ಯಾಂಕ್ ಹಾಗೂ ಬಿಳಗಿ ಸಹಕಾರಿ ಸಂಘದ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ, ಎಸ್ ಸಿ ಮೊರ್ಚಾದ ಜಿಲ್ಲಾಧ್ಯಕ್ಷ ನಂದನ ಬೋರ್ಕರ್ , ಬಿಳಗಿ ಶಕ್ತಿ ಶಕ್ತಿ ಕೇಂದ್ರದ ಪ್ರಮುಖ ರಮಾನಂದ ಮಡಿವಾಳ,ಸಿದ್ದಾಪುರ ತಾಲೂಕಾ ನಿಕಟ ಪೂರ್ವ ಅಧ್ಯಕ್ಷ ಮಾರುತಿ ನಾಯ್ಕ್, ಬಿಜೆಪಿ ಮುಖಂಡ ಗಿರೀಶ್ ಶೇಟ್, ಅಣ್ಣಪ್ಪ,
ಸೇರಿದಂತೆ ಪಕ್ಷದ ಮುಖಂಡರು ಸಾರ್ವಜನಿಕರು ಇದ್ದರು.
ಸಿದ್ದಾಪುರ ಮಂಡಳ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ಸ್ವಾಗತಿಸಿದರು.
ಮಹೇಶ ನಾಯ್ಕ ವಂದಿಸಿದರು.ಆದರ್ಶ ಪೈ ಸಹಕರಿಸಿದರು.
***
ಪ್ರಶಂಸೆಗೆ ಪಾತ್ರವಾದ ಅನಂತಮೂರ್ತಿ ಹೆಗಡೆ
ಜಿಲ್ಲಾ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ತಮ್ಮನ್ನು ತಾವು ಸಕ್ರೀಯ ತೊಡಗಿಸಿಕೊಂಡು ವಿಶೇಷ ಮುತುವರ್ಜಿ ವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ. ಎಂದು ಪಕ್ಷದ ಪ್ರಮುಖರಾದ ಆರ್ ಡಿ ಹೆಗಡೆ, ಕುಮಟಾ ಶಾಸಕ ದಿನಕರ ಶೆಟ್ಟಿ, ಸಂಚಾಲಕ ವೇಂಕಟೇಶ ನಾಯಕ ಸೇರಿದಂತೆ ಹಲವರು ಶ್ಲಾಘನೆ ವ್ಯಕ್ತಪಡಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0