ಜಾಗನಳ್ಳಿಯಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ! ವೀಡಿಯೋ ವೈರಲ್

Mar 3, 2026 - 11:26
 0  115

ಆಪ್ತ ನ್ಯೂಸ್ ಶಿರಸಿ:

ತಾಲೂಕಿನ ಪ್ರಸಿದ್ಧ ಜಾಗನಳ್ಳಿ ಬಳಿ \ಆತಂಕ ಸೃಷ್ಟಿಸುವ ಘಟನೆಯೊಂದು ನಡೆದಿದೆ. ಶಿರಸಿಯ ಮಾರಿಕಾಂಬಾ ಜಾತ್ರೆಗೆ ಬರುತ್ತಿದ್ದ ಮಾರುತಿ ಓಮ್ನಿ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಕಾರು ಧಗಧಗನೆ ಹೊತ್ತಿ ಉರಿದಿದೆ.

ನಡೆದದ್ದೇನು?:

ಮಾರಿಕಾಂಬಾ ಜಾತ್ರೆಗೆ ಸಿದ್ದಾಪುರದ ಕುಳಿಕಟ್ಟು ಗ್ರಾಮದ ವ್ಯಕ್ತಿಯೊಬ್ಬರು ಆಗಮಿಸುತ್ತಿದ್ದರು. ಈ ವೇಳೆ ಶಿರಸಿ ತಾಲೂಕಿನ ಜಾಗನಳ್ಳಿ ಬಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನ ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡು ಹೊಗೆ ಬರಲಾರಂಭಿಸಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಮತ್ತು ಕಾರಿನಲ್ಲಿದ್ದ ಪ್ರಯಾಣಿಕರು ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ.

ಬೂದಿಯಾದ ಕಾರು:

ಕಾರಿನಿಂದ ಹೊಗೆ ಬರುತ್ತಿದ್ದಂತೆಯೇ ಬೆಂಕಿ ಆವರಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದೆ. ಸ್ಥಳೀಯರು ಮತ್ತು ಜಾತ್ರೆಗೆ ಬಂದಿದ್ದ ಭಕ್ತರು ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಹ ಪ್ರಯೋಜನವಾಗಲಿಲ್ಲ. ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಓಮ್ನಿ ಅಗ್ನಿಗೆ ಆಗುತಿಯಾದ ವೀಡಿಯೋ ಇದೀಗ ವೈರಲ್‌ ಆಗಿದೆ. ಆ ವೀಡಿಯೋ ಇಲ್ಲಿದೆ ನೋಡಿ


What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0