ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಎಳೆನೀರು ವ್ಯಾಪಾರಿ ಸಾವು

🛑 ಕುಮಟಾ ಎಪಿಎಂಸಿ ಬಳಿ ದುರಂತ | ಮತ್ತೊಬ್ಬ ಹಣ್ಣು ವ್ಯಾಪಾರಿಗೆ ಗಂಭೀರ ಗಾಯ

Sep 17, 2026 - 13:08
 0  238
ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಎಳೆನೀರು ವ್ಯಾಪಾರಿ ಸಾವು

ಆಪ್ತ ನ್ಯೂಸ್ ಕುಮಟಾ:

ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯೊಂದು ಏಕಾಏಕಿ ಚಲಿಸಿ ಎಳೆನೀರು ವ್ಯಾಪಾರಿಯೊಬ್ಬರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಬೆಳಿಗ್ಗೆ ಕುಮಟಾ ಪಟ್ಟಣದ ಎಪಿಎಂಸಿ ಬಳಿ ನಡೆದಿದೆ.

ಮೃತರನ್ನು ಸುಮಾರು 55 ವರ್ಷದ ಉಮೇಶ ಹಲಮನಕರ ಎಂದು ಗುರುತಿಸಲಾಗಿದೆ ಎನ್ನಲಾಗಿದೆ.

ಮಾಹಿತಿ ಪ್ರಕಾರ, ಲಾರಿ ಚಾಲಕ ವಾಹನವನ್ನು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಚಿಕನ್ ಖರೀದಿಸಲು ತೆರಳಿದ್ದ ಎನ್ನಲಾಗುತ್ತಿದೆ. ಈ ವೇಳೆ ಚಾಲಕನಿಲ್ಲದೆ ನಿಂತಿದ್ದ ಲಾರಿ ಏಕಾಏಕಿ ಚಲಿಸಿ, ಪಕ್ಕದಲ್ಲೇ ಎಳೆನೀರು ಮಾರಾಟ ಮಾಡುತ್ತಿದ್ದ ಉಮೇಶ ಹಲಮನಕರ ಅವರ ಮೇಲೆ ಹರಿದಿದೆ.

ಲಾರಿ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಮೀಪದಲ್ಲಿ ಹಣ್ಣು ವ್ಯಾಪಾರ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಗೂ ಲಾರಿ ಡಿಕ್ಕಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಷಯ ತಿಳಿದು ಕೂಡಲೇ ಕುಮಟಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ಹಾಗೂ ಲಾರಿ ಚಾಲಕನ ಪತ್ತೆಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0