ಭಟ್ಕಳ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

May 24, 2026 - 22:02
 0  83
ಭಟ್ಕಳ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

ಆಪ್ತ ನ್ಯೂಸ್‌ ನವದೆಹಲಿ/ಭಟ್ಕಳ:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಂಭವಿಸಿದ ದುರ್ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಈ ದುರಂತದ ಕುರಿತು ಮಾಹಿತಿ ತಿಳಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಿ ಕಾರ್ಯಾಲಯ (PMO) ಮೂಲಕ ಪ್ರಕಟವಾದ ಸಂದೇಶದಲ್ಲಿ, ಈ ಘಟನೆ ಕುರಿತು ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ನೋವಿಗೆ ಸಂತಾಪ ಸೂಚಿಸಿದ್ದಾರೆ. ದುರಂತದಲ್ಲಿ ಗಾಯಗೊಂಡಿರುವವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ

ಘಟನೆಯ ಹಿನ್ನೆಲೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF) ವತಿಯಿಂದ ಪರಿಹಾರ ಘೋಷಿಸಲಾಗಿದೆ. ದುರಂತದಲ್ಲಿ ಮೃತಪಟ್ಟವರ ವಾರಸುದಾರರಿಗೆ ತಲಾ ₹2 ಲಕ್ಷ ರೂಪಾಯಿ, ಗಾಯಗೊಂಡವರಿಗೆ ₹50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಂದೇಶದಲ್ಲಿ:

"ಕರ್ನಾಟಕದ ಕಾರವಾರ ಜಿಲ್ಲೆಯಲಿ ಸಂಭವಿಸಿದ ದುರಂತದ ಬಗ್ಗೆ ಕೇಳಿ ತೀವ್ರ ಆಘಾತವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ" ಎಂದು ತಿಳಿಸಿದ್ದಾರೆ.

ಸಾರ್ವಜನಿಕರ ಪ್ರಾರ್ಥನೆ

ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ರಾಜ್ಯದ ಜನರು ಪ್ರಾರ್ಥಿಸುತ್ತಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0