ಕಟ್ಟಿನಕಾರು ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ
ಆಪ್ತ ನ್ಯೂಸ್ ಸಾಗರ:
ತಾಲೂಕಿನ ಕರೂರು ಬಾರಂಗಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಟ್ಟಿನಕಾರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜನೆಗೊಂಡಿತ್ತು.
ಉದ್ಘಾಟನಾ ಸಮಾರಂಭದಲ್ಲಿ ಚನ್ನಗೊಂಡ ಗ್ರಾಮ ಪಂಚಾಯತಿ ಅಧ್ಯಕ್ಷ ಯೋಗರಾಜ್, ಕೆಡಿಪಿ ಸದಸ್ಯ ಜಿಟಿ ಸತ್ಯನಾರಾಯಣ, ತಾಲೂಕು ಪಶು ಸಂಗೋಪನ ಸಮಿತಿ ಸದಸ್ಯ ಗಣೇಶ್ ಜಾಕಿ, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಮೊದಲಾದವರು ಪಾಲ್ಗೊಂಡಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಡಾ. ಅನ್ನಪೂರ್ಣ, ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಲಕ್ಷ್ಮಣ್ ಆರ್ ನಾಯಕ್, ಅಧ್ಯಕ್ಷರು ಶಿಕ್ಷಣ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಓಂಕಾರಪ್ಪ, ವೇದಿಕೆಯಲ್ಲಿದ್ದರು. ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್ ವಹಿಸಿದ್ದರು.
ಬಿಳಿಗಾರು, ನಾಗವಳ್ಳಿ, ಕಾರ್ಗಲ್, ಜೋಗ ಹಾಗೂ ಕಟ್ಟಿನಕಾರು ಪ್ರೌಢಶಾಲಾ ವಿದ್ಯಾರ್ಥಿಗಳು ಹಲವು ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದರು. ಮುಖ್ಯ ಶಿಕ್ಷಕ ಬಸವರಾಜಪ್ಪ ಪ್ರಾಸ್ತಾವಿಕ ಮಾತನಾಡಿದರು. ಹರೀಶ್ ಸ್ವಾಗತಿಸಿದರು. ಎಂಜಿ ಹರಿಪ್ರಸಾದ್ ವಂದಿಸಿದರೆ, ಮಧುಕೇಶ್ವರ್ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



