ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ವಿವಾದಾತ್ಮಕ ಹೇಳಿಕೆ ನೀಡಿದ ಪುರುಷೋತ್ತಮ ಬಿಳಿಮಲೆ
ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹವೇ ಇರುತ್ತಿತ್ತು. ಸ್ತ್ರೀವೇಷದ ಕಲಾವಿದ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ-ಪುರುಷೋತ್ತಮ ಬಿಳಿಮಲೆ
ಆಪ್ತ ನ್ಯೂಸ್ ಮೈಸೂರು:
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಎನ್ನುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಅಸಂಖ್ಯಾತ ಸಂಖ್ಯೆಯಲ್ಲಿರುವ ಯಕ್ಷಗಾನ ಅಭಿಮಾನಿಗಳು ಹಾಗೂ ಯಕ್ಷಗಾನ ಕಲಾವಿದರ ಮನಸ್ಸಿಗೆ ಘಾಸಿಯನ್ನು ಉಂಟು ಮಾಡಿದ್ದಾರೆ.
ಯಕ್ಷಗಾನದ ಕಲಾವಿದರು ಎದುರಿಸುವ ವೇದಿಕೆಯ ಹಿಂದಿನ ನಿಜಸ್ಥಿತಿ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೀಡಿದ ಹೇಳಿಕೆ ಇದೀಗ ಸಂಸ್ಕೃತಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ “ಧರೆಗೆ ಒ೦ದು ದೊಡ್ಡ ಕಾವ್ಯ” ಮತ್ತು “ನಾವು ಕೂಗುವ ಕೂಗು” ಕೃತಿಗಳ ಅನಾವರಣ ಕಾರ್ಯಕ್ರಮದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರ ಹೇಳಿಕೆಯ ಆಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಕ್ಷಗಾನ ಕಲಾವಿದರು ವರ್ಷದಲ್ಲಿ 6–8 ತಿಂಗಳು ಮೇಳದೊಂದಿಗೆ ಪ್ರವಾಸದಲ್ಲೇ ಕಾಲ ಕಳೆಯುವುದರಿಂದ, ಕುಟುಂಬ ಹಾಗೂ ಸಮಾಜದ ಸಂಧರ್ಭಗಳಿಂದ ದೂರವಾಗಬೇಕಾಗುತ್ತದೆ ಎಂದು ಹೇಳಿದರು. ಇದು ಹಲವು ರೀತಿಯ ಸಾಮಾಜಿಕ ಮತ್ತು ಮಾನಸಿಕ ಒತ್ತಡಗಳನ್ನುಂಟುಮಾಡುತ್ತದೆ ಎಂಬುದು ಅವರ ಅಭಿಪ್ರಾಯ.
ಸ್ತ್ರೀ ವೇಷಧಾರಿಗಳು ಎದುರಿಸುವ ಒತ್ತಡ, ಒಳಗಣ ರಾಜಕಾರಣ, ಹಾಗೂ ಕಲಾವಿದರಿಗೆ ಎದುರಾಗುವ ಅನಿವಾರ್ಯ ಅವಲಂಬನೆಗಳನ್ನೂ ಅವರು ವಿವರಿಸಿದರು. ಕೆಲವು ಸಂದರ್ಭಗಳಲ್ಲಿ ಕಲಾವಿದರು ಕೆಲವು ಒತ್ತಡಗಳಿಗೆ ತಲೆಬಾಗದಿದ್ದರೆ, ಮೇಳದ ಭಾಗವತರು ಮುಂದಿನ ದಿನ ವೇದಿಕೆಯ ಮೇಲೆಯೇ ಪದ್ಯ, ರಾಗ-ತಾಳಗಳಲ್ಲಿ ಸಹಕಾರ ನೀಡದೆ ಸೂಕ್ಷ್ಮವಾದ ಪ್ರತೀಕಾರ ತೀರಿಸಲಾಗುತ್ತಿತ್ತೆಂದು ಅವರು ಹೇಳಿದರು.
ಪುರುಷೋತ್ತಮ ಬಿಳಿಮಲೆ ಹೇಳಿದ್ದೇನು ಗೊತ್ತಾ?
ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹವೇ ಇರುತ್ತಿತ್ತು. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಆ ಮೂಲಕ ರಂಗಭೂಮಿ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗ್ತಿತ್ತು.
-ಪುರುಷೋತ್ತಮ ಬಿಳಿಮಲೆ
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



