ಕಲಿಯುಗದ ಕುಡುಕ ಖ್ಯಾತಿಯ ರಾಜು ತಾಳಿಕೋಟೆ ಇನ್ನಿಲ್ಲ
‘ಕಲಿಯುಗದ ಕುಡುಕ’ ನಾಟಕದ ಮೂಲಕ ಜನಮನ ಗೆದ್ದ ನಟ ರಾಜು ತಾಳಿಕೋಟೆ ಇಹಲೋಕ ತ್ಯಜಿಸಿದ್ದಾರೆ. ಅವರು ಇಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನರಾದರು.

ಆಪ್ತ ನ್ಯೂಸ್ ಧಾರವಾಡ:
‘ಕಲಿಯುಗದ ಕುಡುಕ’ ನಾಟಕದ ಮೂಲಕ ಜನಮನ ಗೆದ್ದ ನಟ ರಾಜು ತಾಳಿಕೋಟೆ ಇಹಲೋಕ ತ್ಯಜಿಸಿದ್ದಾರೆ. ಅವರು ಇಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನರಾದರು.
ನಿನ್ನೆ ಸಂಭವಿಸಿದ ಹೃದಯಾಘಾದಿಂದ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ರಾಜು ತಾಳಿಕೋಟೆ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಶೈಲಿಯ ಅಭಿನಯದಿಂದ ಖ್ಯಾತಿ ಪಡೆದಿದ್ದರು. ವಿಶೇಷವಾಗಿ ಹಾಸ್ಯ ಪಾತ್ರಗಳಲ್ಲಿ ಅವರು ನೀಡಿದ ನಟನೆ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. "ಕಲಿಯುಗದ ಕುಡುಕ" ನಾಟಕ ಅವರಿಗೆ ವಿಶೇಷ ಹೆಸರು ತಂದುಕೊಟ್ಟಿತ್ತು. ಯೋಗರಾಜ್ ಭಟ್ಟರ ನಿರ್ದೇಶನದ ಹಲವು ಚಲನಚಿತ್ರಗಳಲ್ಲಿ ನಟನೆ ಮಾಡಿ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು.
ತಾಳಿಕೋಟೆಯವರು ಚಿತ್ರರಂಗದ ಜೊತೆಗೆ ನಾಟಕ ರಂಗದಲ್ಲಿಯೂ ಸಕ್ರಿಯರಾಗಿದ್ದರು. ನಾಟಕದ ಮೂಲಕ ತಮ್ಮ ಕಲಾಜೀವನ ಆರಂಭಿಸಿದ ಅವರು ನಂತರ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಕಳೆದ ಎರಡು ದಶಕಗಳಲ್ಲಿ ಹಲವು ಜನಪ್ರಿಯ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು.
ರಾಜು ತಾಳಿಕೋಟೆಯ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ಅಭಿಮಾನಿಗಳಲ್ಲಿ ಶೋಕದ ಛಾಯೆ ಆವರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಅವರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಬದುಕು-ನಟನೆ
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು.
ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು.
ರಾಜು ತಾಳಿಕೋಟಿಯವರು ಉತ್ತರ ಕರ್ನಾಟಕದ ಶೈಲಿಯ ಭಾಷೆ ಮತ್ತು ಉಡುಗೆ-ತೊಡುಗೆಯೊಂದಿಗೆ ಹಾಸ್ಯ ಪಾತ್ರಗಳನ್ನು ಮಾಡುತ್ತಿದ್ದರಿಂದ ಅಪಾರ ಜನಪ್ರಿಯತೆ ಗಳಿಸಿದ್ದರು. 'ಕಲಿಯುಗದ ಕುಡುಕ', 'ಕುಡುಕರ ಸಾಮ್ರಾಜ್ಯ', ಮತ್ತು 'ಅಸಲಿ ಕುಡುಕ' ಅವರ ಪ್ರಖ್ಯಾತ ನಾಟಕಗಳಾಗಿದ್ದು, ಈ ನಾಟಕಗಳ ಆಡಿಯೊ ಕ್ಯಾಸೆಟ್‌ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿದ್ದವು.
What's Your Reaction?






