ಹುತ್ಕಂಡ ಶಾಲೆಯಲ್ಲಿ ರಾಜ್ಯೋತ್ಸವ ಸಡಗರ

Nov 1, 2025 - 16:55
 0  25
ಹುತ್ಕಂಡ ಶಾಲೆಯಲ್ಲಿ ರಾಜ್ಯೋತ್ಸವ ಸಡಗರ

ಆಪ್ತ ನ್ಯೂಸ್ ಯಲ್ಲಾಪುರ:

ತಾಲೂಕಿನ ಹುತ್ಕಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಕನ್ನಡಾಂಬೆ ತಾಯಿ ಭುವನೇಶ್ವರಿದೇವಿಯ ಪೂಜೆಗೈಯ್ಯಲಾಯಿತು. ರಾಜ್ಯೋತ್ಸವ ನಿಮಿತ್ತ ಮಕ್ಕಳಿಂದ ಹಾಡು, ನೃತ್ಯ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮುಖ್ಯಾಧ್ಯಾಪಕ ಸತೀಶ ಶೆಟ್ಟಿ ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ನರಸಿಂಹ ಸಾತೊಡ್ಡಿ ಅಧ್ಯಕ್ಷತೆ ವಹಿಸಿ ಶುಭಕೋರಿದರು. ಉಪಾಧ್ಯಕ್ಷೆ ಗೀತಾ ಗೋಪಾಲಕೃಷ್ಣ ಭಟ್ಟ, ಸಹಶಿಕ್ಷಕಿ ವಿಜಯಲಕ್ಷ್ಮೀ ಹೆಗಡೆ, ನೇತ್ರಾವತಿ ಬಿ.ಎಂ, ಪಾಲಕರು ಮತ್ತಿತರರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0