ಇಂದು ಕಾನಸೂರಿನಲ್ಲಿ ಗೆಳೆಯರ ಬಳಗದ ರಾಜ್ಯೋತ್ಸವ
ಆಪ್ತ ನ್ಯೂಸ್ ಕಾನಸೂರು:
ಕಾನಸೂರಿನ ಗೆಳೆಯರ ಬಳಗದಿಂದ ಹಮ್ಮಿಕೊಂಡ 5 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಇಂದು ರಾತ್ರಿ 8.30 ರಿಂದ ಕಾನಸೂರಿನ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜರುಗಲಿದೆ.
ಉದ್ಯಮಿ ಆರ್.ಜಿ.ಶೇಟ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಾನಸೂರು ಗ್ರಾಪಂ ಅಧ್ಯಕ್ಷೆ ಅನಿತಾ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಸುಬ್ರಾಯ ಮತ್ತೀಹಳ್ಳಿ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ. ಅನಂತಮೂರ್ತಿ ಚ್ಯಾರಿಟೇಬಲ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಅತಿಥಿಗಳಾಗಿ ಗ್ರಾಪಂ ಉಪಾಧ್ಯಕ್ಷೆ ಸವಿತಾ ಕಾನಡೆ, ಸದಸ್ಯರಾದ ಶಶಿಕಾಂತ ನಾಮಧಾರಿ, ಮನೋಜ ಶಾನಭಾಗ, ಶಶಿಪ್ರಭಾ ಹೆಗಡೆ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಭಾರತಿ ನಾಯ್ಕ ಪಾಲ್ಗೊಳ್ಳಲಿದ್ದಾರೆ.
ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ವಸಂತ ಶೆಟ್ಟಿ, ಸರ್ಕಾರಿ ಅಭಿಯೋಜಕ ರಾಜೇಶ ಮಳಗೀಕರ, ಧಾರವಾಡ ಹಾಲು ಒಕ್ಕೂಟದ ಪ್ರಭಾರಿ ಅಧ್ಯಕ್ಷ ಸುರೇಶ್ಚಂದ್ರ ಹೆಗಡೆ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂಘಟಕ ರಾಜು ಕಾನಸೂರು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



