ಮುಂಡಗೋಡದಲ್ಲಿ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

Jun 23, 2026 - 21:21
 0  55
ಮುಂಡಗೋಡದಲ್ಲಿ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಆಪ್ತ ನ್ಯೂಸ್ ಮುಂಡಗೋಡ:

ಫಾರ್ಮ್‌ಹೌಸ್‌ ಪರವಾನಿಗೆ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಮುಂಡಗೋಡದ ಕಂದಾಯ ನಿರೀಕ್ಷಕ (RI) ಬಸವರಾಜ ಬಿಸನಾಳ ಅವರನ್ನು ಕಾರವಾರ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬಲೆಗೆ ಕೆಡವಿದ್ದಾರೆ.

ಮಾಹಿತಿಯ ಪ್ರಕಾರ, ಪಾಳ ಹಾಗೂ ಮುಂಡಗೋಡ ವ್ಯಾಪ್ತಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ ಬಿಸನಾಳ ಅವರು, ಮುಂಡಗೋಡ ತಾಲೂಕಿನ ಕೃಷಿಕ ನಾರಾಯಣ ಅರೆಜೋಗಿ ಅವರಿಂದ ಫಾರ್ಮ್‌ಹೌಸ್‌ ಪರವಾನಿಗೆ ನೀಡುವ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಇಂದು ನಾರಾಯಣ ಅರೆಜೋಗಿ ಅವರಿಂದ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಕಾರವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಬಸವರಾಜ ಬಿಸನಾಳ ಅವರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಕಾರವಾರ ಲೋಕಾಯುಕ್ತ ಪೊಲೀಸ್‌ ತಂಡ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ. ದಾಳಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0