ಶಿರಸಿಯಲ್ಲಿ ಆತ್ಮಹತ್ಯೆಗೆ ಶರಣಾದ ಸಾಗರ ಮೂಲದ ವಿದ್ಯಾರ್ಥಿ

Aug 21, 2026 - 08:53
 0  270
ಶಿರಸಿಯಲ್ಲಿ ಆತ್ಮಹತ್ಯೆಗೆ ಶರಣಾದ ಸಾಗರ ಮೂಲದ ವಿದ್ಯಾರ್ಥಿ

ಆಪ್ತ ನ್ಯೂಸ್ ಶಿರಸಿ:

ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಬನವಾಸಿ ರಸ್ತೆಯ ದೊಡ್ಡಲುಬಾವಿ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ ನಡೆದಿದೆ.

ಸಾಗರ ತಾಲೂಕಿನ ಇಂದುಧರ ದೇವೇಂದ್ರಪ್ಪ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಹುಬ್ಬಳ್ಳಿ ರಸ್ತೆಯಲ್ಲಿರುವ ಕಾಲೇಜೊಂದರಲ್ಲಿ ಫೈರ್ ಆ್ಯಂಡ್ ಸೇಫ್ಟಿ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ ಅವರು, ದೊಡ್ಡಲುಬಾವಿ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿಎಸ್‌ಐ ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0