ಶಿರಸಿಯಲ್ಲಿ ಬೀಕರ ಹತ್ಯೆ: ರಾತ್ರಿ ಬಂದ ಫೋನ್ ಕರೆಯ ಬಳಿಕ ಹೊರಗೆ ಹೋದ ಯುವಕ ಕಾಡಿನಲ್ಲಿ ಶವವಾಗಿ ಪತ್ತೆ
ಆಪ್ತ ನ್ಯೂಸ್ ಶಿರಸಿ:
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಡ್ತಳ್ಳಿ–ಶಿಂಗನಮನೆ ನಡುವಿನ ಕಾಡು ಪ್ರದೇಶದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ಮೃತನನ್ನು ಶಿಂಗನಮನೆ (ಮುಕ್ರಿಗುಡ್ಡೆ) ನಿವಾಸಿ ಪರಮೇಶ್ವರ ನಾಯ್ಕ (32) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಗುರುವಾರ ರಾತ್ರಿ ಬಂದ ಫೋನ್ ಕರೆಯ ಹಿನ್ನೆಲೆಯಲ್ಲಿ ಪರಮೇಶ್ವರ ನಾಯ್ಕ ಮನೆಯಿಂದ ಹೊರಗೆ ತೆರಳಿದ್ದು, ಬಳಿಕ ಅವರು ಮರಳಿ ಮನೆಗೆ ಬಂದಿರಲಿಲ್ಲ. ಇಂದು ಬೆಳಗ್ಗೆ ಇಡ್ತಳ್ಳಿ ಮತ್ತು ಶಿಂಗನಮನೆ ನಡುವಿನ ಕಾಡಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.
ಸದ್ಯಕ್ಕೆ ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ, ಹಳೆಯ ವೈಮನಸ್ಸು ಅಥವಾ ಇತರೆ ಯಾವುದೇ ಕಾರಣ ಇದಕ್ಕೆ ಹಿನ್ನೆಲೆಯೇ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಪರಮೇಶ್ವರ ನಾಯ್ಕ ಅವರನ್ನು ಯಾರು, ಯಾವ ಕಾರಣಕ್ಕೆ ಕಾಡಿಗೆ ಕರೆಸಿಕೊಂಡರು ಹಾಗೂ ಹತ್ಯೆಯ ಹಿಂದಿರುವ ಸಂಚು ಏನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದೆ.
What's Your Reaction?
Like
0
Dislike
0
Love
1
Funny
0
Angry
0
Sad
0
Wow
0



