ಶಿರಸಿ ಮಾರಿಕಾಂಬಾ ದೇವಸ್ಥಾನದ ನೂತನ ಆಡಳಿತ ಮಂಡಳಿ ಸಂಸದ ಕಾಗೇರಿ ಭೇಟಿ; ಅಭಿವೃದ್ಧಿಗೆ ಸಂಪೂರ್ಣ ಬೆಂಬಲದ ಭರವಸೆ
ಆಪ್ತ ನ್ಯೂಸ್ ಶಿರಸಿ:
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳು ಸೋಮವಾರ ಶಿರಸಿಯಲ್ಲಿರುವ ಸಂಸದರ ಕಚೇರಿಯಲ್ಲಿ ಸೌಹಾರ್ದಯುತವಾಗಿ ಭೇಟಿಯಾಗಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು.
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ರವಿ ಬೆಳ್ಳಿಮನೆ, ಉಪಾಧ್ಯಕ್ಷ ಅಶೋಕ್ ಪವಾರ್, ಪದಾಧಿಕಾರಿಗಳಾದ ವಿನಾಯಕ ಶೇಟ್, ಕೇಶವ ಹೆಗಡೆ ಹಾಗೂ ಅರ್ಚನಾ ರಾಘವೇಂದ್ರ ಅವರು ಸಂಸದರಿಗೆ ಶ್ರೀದೇವಿಯ ಪ್ರಸಾದವನ್ನು ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಿದರು.
ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, "ಐತಿಹಾಸಿಕ ಶಿರಸಿ ಮಾರಿಕಾಂಬಾ ದೇವಸ್ಥಾನವು ನೂತನ ಆಡಳಿತ ಮಂಡಳಿಯ ಅವಧಿಯಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಭಕ್ತರಿಗೆ ಹೆಚ್ಚಿನ ಮತ್ತು ಉತ್ತಮ ಸೌಲಭ್ಯಗಳು ದೊರೆಯುವಂತಾಗಬೇಕು. ದೇವಸ್ಥಾನದ ಆಡಳಿತ ಯಶಸ್ವಿಯಾಗಿ ನಡೆಯಲು ನಮ್ಮ ಸಂಪೂರ್ಣ ಸಹಕಾರ ಮತ್ತು ಬೆಂಬಲ ಸದಾ ಇರುತ್ತದೆ" ಎಂದು ಶುಭ ಹಾರೈಸಿದರು.
ದೇವಸ್ಥಾನದ ಅಭಿವೃದ್ಧಿ, ಭಕ್ತರಿಗೆ ಮೂಲಸೌಕರ್ಯಗಳ ವಿಸ್ತರಣೆ ಹಾಗೂ ಆಡಳಿತದ ಪರಿಣಾಮಕಾರಿ ನಿರ್ವಹಣೆಗೆ ಸಂಸದರ ಬೆಂಬಲ ವ್ಯಕ್ತವಾಗಿರುವುದು ನೂತನ ಆಡಳಿತ ಮಂಡಳಿಗೆ ಮತ್ತಷ್ಟು ಉತ್ತೇಜನ ನೀಡಿದೆ. ಈ ಭೇಟಿ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



