ನಂದಿಗದ್ದೆಯಲ್ಲಿ ವಿಶೇಷ ಗ್ರಾಮ ಸಭೆ ಯಶಸ್ವಿ ಸಂಪನ್ನ

ಆಪ್ತ ನ್ಯೂಸ್ ಜೋಯಿಡಾ:
ಸಾರ್ವಜನಿಕರು ನರೇಗಾ ಯೋಜನೆಯ ಲಾಭ ಪಡೆದುಕೊಂಡು ತಮ್ಮ ಜೀವನ ಮಟ್ಟವನ್ನು ಸುಧಾರಿಸಿ ಕೊಳ್ಳಬೇಕೆಂದು ನಂದಿಗದ್ದಾ ಗ್ರಾಮ ಪಂಚಾಯತ್ ಅಧ್ಯಕ್ಷ ಅರುಣ ದೇಸಾಯಿ ಹೇಳಿದರು.
ಅವರು ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ 2026-27 ನೇಯ ಸಾಲಿನ ಕಾಮಗಾರಿ ಕ್ರಿಯಾ ಯೋಜನೆ ತಯಾರಿಸಲು, ಬೇಡಿಕೆಗಳ ಪಟ್ಟಿ ಸಲ್ಲಿಸಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ನಡೆದ ವಿಶೇಷ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಗ್ರಾಮಸಭೆಯ ಆರಂಭದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ದತ್ತಾತ್ರೇಯ ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಅನುಷ್ಠಾನದ ಕುರಿತು ಮಾಹಿತಿ ನೀಡಿದರು.
ಗ್ರಾಮ ಆಡಳಿತ ಅಧಿಕಾರಿ ಶಿವಾನಂದ ರವರು ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯ ಮಾಹಿತಿ ನೀಡಿದರು.
ಸಾರ್ವಜನಿಕರು ತಮ್ಮ ತಮ್ಮ ಬೇಡಿಕೆಗಳನ್ನು ಸಭೆಯಲ್ಲಿ ಮಂಡಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ದಾಕ್ಷಾಯಣಿ ದಾನಶೂರ, ಸದಸ್ಯರಾದ ಧವಳೋ ಸಾವರ್ಕರ್, ಸುಮನಾ ಹರಿಜನ, ಶೋಭಾ ಎಲ್ಲೇಕರ, ಅವುರ್ಲಿ ಅರಣ್ಯ ಇಲಾಖೆಯ ವನಪಾಲಕ ರೇವಣ ಸಿದ್ಧ ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ ಕಾರ್ಯದರ್ಶಿ ಗಜಾನನ ಸಾವರ್ಕರ್ ಸ್ವಾಗತಿಸಿ, ನಿರ್ವಹಿಸಿದರು.
What's Your Reaction?






