ಪೋಲೀಸರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಆಪ್ತ ನ್ಯೂಸ್ ಶಿರಸಿ:
ಶಿರಸಿ ಉಪವಿಭಾಗದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮಕ್ಕಳಲ್ಲಿ ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಐವರು ವಿದ್ಯಾರ್ಥಿಗಳಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಸ್.ಎಸ್.ಭಟ್ಟ ಲೋಕೇಶ್ವರ ಇವರ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಎಸ್.ಎಸ್.ಭಟ್ಟ ಲೋಕೇಶ್ವರ ಅವರು ಪ್ರತಿ ವರ್ಷ ನೀಡುತ್ತಿರುವ ಪ್ರತಿಭಾ ಪುರಸ್ಕಾರದಡಿಯಲ್ಲಿ ಶಿರಸಿ ತಾಲೂಕಿನ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಕ್ಕಳಿಗೆ ಈ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಉಲ್ಲೇಖನೀಯ.
ಶಿರಸಿ ಉಪವಿಭಾಗದ ಡಿಎಸ್‌ಪಿ ಗೀತಾ ಪಾಟೀಲ್ ಪ್ರತಿಭಾ ಪುರಸ್ಕಾರ ನಡೆಸಿಕೊಟ್ಟರು. ಸಿಪಿಐ ಶಶಿಕಾಂತ ವರ್ಮಾ ಉಪಸ್ಥಿತರಿದ್ದು, ಸಹಕರಿಸಿದರು. ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಿದ ಎಸ್.ಎಸ್.ಭಟ್ಟ ಲೋಕೇಶ್ವರ ಇವರನ್ನು ಇದೇ ಸಂದರ್ಭದಲ್ಲಿ ಡಿಎಸ್‌ಪಿ ಗೀತಾ ಪಾಟೀಲ ಸನ್ಮಾನಿಸಿ, ಗೌರವಿಸಿದರು.
What's Your Reaction?






