ಟೆಂಪೋ ಟಿಪ್ಪರ್ ಡಿಕ್ಕಿ: ೧೨ ಜನರಿಗೆ ಗಾಯ
ಆಪ್ತ ನ್ಯೂಸ್ ಕಾರವಾರ:
ತಾಲೂಕಿನ ಮುದಗಾ ಸಮೀಪದಲ್ಲಿ ಸೋಮವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಮುದಗಾದಲ್ಲಿ ಪ್ರಯಾಣಿಕರ ಟೆಂಪೋವು ಟಿಪ್ಪರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಘಟನೆಯ ವಿವರ ಹೀಗಿದೆ:
ಅಂಕೋಲಾದಿಂದ ಕಾರವಾರದತ್ತ ಬರುತ್ತಿದ್ದ ಟೆಂಪೋವು ಮುದಗಾ ಬಳಿ ಇರುವ ಹಂಪ್ ಕಾರಣದಿಂದ ನಿಧಾನವಾಗಿ ಚಲಿಸುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಅಪಘಾತದ ಸಂದರ್ಭದಲ್ಲಿ ಟೆಂಪೋ ಚಾಲಕ ಟೆಂಪೋಕ್ಕೆ ತಕ್ಷಣವೇ ಬ್ರೇಕ್ ಹಾಕಿದರೂ ಬ್ರೇಕ್ ಸರಿಯಾಗಿ ಕೆಲಸ ಮಾಡಿಲ್ಲ. ಇದರಿಂದ ಡಿಕ್ಕಿ ಸಂಭವಿಸಿದೆ.
ಅಪಘಾತದ ನಂತರ ಗಾಯಗೊಂಡ ಪ್ರಯಾಣಿಕರನ್ನು ಕೂಡಲೇ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರೆದಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



