ಯಾಣಕ್ಕೆ ಹೊರಟಿದ್ದ ಪ್ರವಾಸಿಗರ ಕಾರು ಕಾನಗೋಡಿನಲ್ಲಿ ಪಲ್ಟಿ

Sep 3, 2026 - 11:34
 0  137
ಯಾಣಕ್ಕೆ ಹೊರಟಿದ್ದ ಪ್ರವಾಸಿಗರ ಕಾರು ಕಾನಗೋಡಿನಲ್ಲಿ ಪಲ್ಟಿ

ಆಪ್ತ ನ್ಯೂಸ್ ಶಿರಸಿ

 ಯಾಣ ಪ್ರವಾಸಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಗ್ಗಿಗೆ ಉರುಳಿ ಬಿದ್ದ ಘಟನೆ ಶಿರಸಿ ತಾಲೂಕಿನ ಕಾನಗೋಡಿನಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ತುಮಕೂರು ಮೂಲದ ಪ್ರವಾಸಿಗರು ಕಾರಿನಲ್ಲಿ ಯಾಣದತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಅತಿ ವೇಗದಲ್ಲಿದ್ದ ಎನ್ನಲಾಗಿದ್ದು, ರಸ್ತೆಗೆ ಅಡ್ಡಲಾಗಿ ಬಂದ ನಾಯಿಯನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ತಗ್ಗಿಗೆ ಪಲ್ಟಿಯಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಕೆಲ ಪ್ರವಾಸಿಗರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್, ಭಾರಿ ಅಪಾಯವೊಂದು ತಪ್ಪಿದಂತಾಗಿದೆ.

ಅಪಘಾತದ ಬಳಿಕ ತಗ್ಗಿನಲ್ಲಿ ಬಿದ್ದಿದ್ದ ಕಾರನ್ನು ಕ್ರೇನ್‌ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0