ದಾಂಡೇಲಿ ಉದ್ಯಾನವನದಲ್ಲಿ ಯುವಕ ನೇಣಿಗೆ ಶರಣು
ಆಪ್ತ ನ್ಯೂಸ್ ದಾಂಡೇಲಿ:
ನಗರದ ಸಾಯಿನಗರದ ಉದ್ಯಾನವನದಲ್ಲಿ 23 ವರ್ಷದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ.
ಮೃತನನ್ನು ಮೂಲತಃ ಗಾಂಧಿನಗರದ ರೈಲ್ವೆ ಹಳಿ ಸಮೀಪದ ನಿವಾಸಿಯಾಗಿದ್ದ ಮಂಜುನಾಥ ಮಲ್ಲೇಶ ನಿಂಬಾಳ್ಕರ (23) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಕಳೆದ ಮೂರು-ನಾಲ್ಕು ವರ್ಷಗಳಿಂದ ಮಂಜುನಾಥ ತನ್ನ ತಾಯಿ ಹಾಗೂ ಸಹೋದರಿಯರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದ. ಮೂರು ದಿನಗಳ ಹಿಂದಷ್ಟೇ ದಾಂಡೇಲಿಗೆ ಬಂದಿದ್ದ ಎನ್ನಲಾಗಿದೆ. ಆದರೆ, ಇಷ್ಟರಲ್ಲೇ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಯ ಹಿಂದಿನ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಮೃತನ ಕುಟುಂಬಸ್ಥರು ಹಾಗೂ ಪರಿಚಿತರನ್ನು ವಿಚಾರಣೆ ನಡೆಸಲಾಗುತ್ತಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



