ಚವತ್ತಿ ಬಳಿ ಬೈಕ್ ಸ್ಕಿಡ್ ಆಗಿ ಯುವಕ ದುರ್ಮರಣ

Oct 18, 2026 - 21:10
 0  462
ಚವತ್ತಿ ಬಳಿ ಬೈಕ್ ಸ್ಕಿಡ್ ಆಗಿ ಯುವಕ ದುರ್ಮರಣ

ಆಪ್ತ ನ್ಯೂಸ್ ಯಲ್ಲಾಪುರ / ಉಮ್ಮಚಗಿ:

ಬೈಕ್‌ನಲ್ಲಿ ಸಂಚರಿಸುತ್ತಿದ್ದ ಯುವಕನೊಬ್ಬ ಬೈಕ್ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಯಲ್ಲಾಪುರ ತಾಲೂಕಿನ ಉಮ್ಮಚಗಿ ಸಮೀಪದ ಚವತ್ತಿ ಬಳಿ ನಡೆದಿದೆ.

ಮೃತರನ್ನು ಯಲ್ಲಾಪುರ ತಾಲೂಕಿನ ಸಾತೊಡ್ಡಿ ಸಮೀಪದ ಬಿಸಗೋಡ ಗ್ರಾಮದ ವಿವೇಕ ದತ್ತಾತ್ರೇಯ ಭಟ್ ಎಂದು ಗುರುತಿಸಲಾಗಿದೆ.

ವಿವೇಕ ಅವರು ಶನಿವಾರ ರಾತ್ರಿ ತಮ್ಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚವತ್ತಿ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ರಾತ್ರಿ ನಡೆದ ಈ ಘಟನೆ ತಕ್ಷಣ ಯಾರ ಗಮನಕ್ಕೂ ಬಂದಿರಲಿಲ್ಲ ಎನ್ನಲಾಗಿದ್ದು, ಮರುದಿನ ಬೆಳಗ್ಗೆ ಸ್ಥಳೀಯರು ಗಮನಿಸಿ ಪೊಲೀಸರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಬಳಿಕವಷ್ಟೇ ಅಪಘಾತದ ವಿಷಯ ಬೆಳಕಿಗೆ ಬಂದಿದೆ.

ಘಟನೆಯ ಮಾಹಿತಿ ಪಡೆದ ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಅಪಘಾತ ಸಂಭವಿಸಿದ ನಿಖರ ಕಾರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ಮೂಡಿದೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0